NEWSನಮ್ಮಜಿಲ್ಲೆಸಂಸ್ಕೃತಿ

ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ: ಸಿಎಂ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ : ಈ ಬಾರಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲು ಈಗಾಗಲೇ ಬಜೆಟ್‌ ಸಿದ್ಧತೆಯಲ್ಲಿ ತೊಡಗಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದ ಉಣಕಲ್ಲದ ಸಿದ್ದಪ್ಪಜನವರ ಜಾತ್ರೆ ಅಂಗವಾಗಿ ಮೂಲ ಗದ್ದುಗೆ ಮಠಕ್ಕೆ ಭಾನುವಾರ ಭೇಟಿ ನೀಡಿದ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಜೆಟ್ ಸಿದ್ಧಪಡಿಸುವ ಕುರಿತು ವಿವಿಧ ಇಲಾಖೆಗಳ ಜತೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯಕ್ಕೆ ಅತ್ಯುತ್ತಮ ಬಜೆಟ್ ನೀಡಲಾಗುವುದು, ಅದರಲ್ಲೂ ಉತ್ತರ ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು.

ಇನ್ನು ದೇಗುಲಕ್ಕೆ ನಾನು ಚಿಕ್ಕಂದಿನಿಂದಲೂ ಬರುತ್ತಿದ್ದೇನೆ. ಇದೇ ಮೊದಲ ಬಾರಿ ಏನು ಅಲ್ಲ. ಆದರೆ, ಇಂದು ವಿಶೇಷವಾಗಿ ಜಾತ್ರೆ ಇರುವ ಹಿನ್ನೆಲೆಯಲ್ಲಿ ಅಜ್ಜನ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ