NEWSನಮ್ಮಜಿಲ್ಲೆ

ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಡಿ ಒಂಟಿಮನೆಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನದ ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ. ಸಹಾಯಧನಕ್ಕಾಗಿ 20.01.2023 ರವರೆಗೆ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2022-23ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಡಿ ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ. ಸಹಾಯಧನ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು  18.11.2022ರವರಗೆ ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು.

ಆದರೆ ಈ ಅವಧಿಯಲ್ಲಿ ಅರ್ಜಿಗಳನ್ನು ಆನ್‌ಲೈನ್‌ ಮುಖಾಂತರ ಸಲ್ಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೊಮ್ಮೆ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡುವಂತೆ ಸ್ಥಳೀಯ ಶಾಸಕರು ಹಾಗೂ ಕೆಲವು ಅರ್ಹರು ಪಾಲಿಕೆಯ ಗಮನಕ್ಕೆ ತಂದಿದ್ದಾರೆ.

ಆದುದರಿಂದ ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5.00 ಲಕ್ಷ ರೂ ಸಹಾಯಧನ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: ದಿನಾಂಕ:20.01.2023ರವರೆಗೆ ಕೊನೆ ದಿನಾಂಕವಾಗಿ ನಿಗಧಿಪಡಿಸಲಾಗಿದ್ದು, ಅರ್ಹರು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕ ಪಾವತಿಸಿ ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರು ರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು, ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ