CrimeNEWSದೇಶ-ವಿದೇಶ

ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರಿಂದ ಸಾಮೂಹಿಕ ಅತ್ಯಾಚಾರ..!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಂಜಾಬ್‌: ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರು ಮೇಲೆರಗಿ ಅತ್ಯಾಚಾರ ಮಾಡಿರುವ ಘಟನೆ ದೇಶದಲ್ಲಿ ನಡೆದಿದ್ದರು, ಯುವ ಸಮುದಾಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

ಹೌದು! ದೇಶದಲ್ಲಿ ಈವರೆಗೂ ಮಹಿಳೆಯರು ಮತ್ತು ಯುವತಿಯರಿಗೆ ರಕ್ಷಣೆ ಇಲ್ಲ ಎಂದು ಅಲ್ಲಲ್ಲಿ ಕೇಳಿ ಬರುತ್ತಿತ್ತು. ಆದರೆ ಪ್ರಸ್ತುತ ಘಟನೆ ಗಮನಿಸಿದರೆ ಪುರುಷರಿಗೂ ರಕ್ಷೆಣೆ ಇಲ್ಲ ಎಂಬುವುದು ಆತಂಕಕ್ಕೆ ಕಾರಣವಾಗಿದೆ.

ಪಂಜಾಬ್‌ನ ಜಲಂಧರ್‌ನ ಅರಣ್ಯ ಪ್ರದೇಶದಲ್ಲಿ ನಾಲ್ವರು ಯುವತಿಯರು ಕಾಡಿನಲ್ಲಿ ಯುವಕನಿಗೆ ಮಾದಕ ದ್ರವ್ಯ (Narcotics) ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕಪುರ್ತಲಾ ರಸ್ತೆಯ ಬಳಿ ಮನೆಗೆ ತೆರಳುತ್ತಿದ್ದ ನನ್ನನ್ನು ಯುವತಿಯರು ವಿಳಾಸ ಕೇಳಿದರು. ನಾನು ಹೇಳುತ್ತಿದ್ದ ವೇಳೆ ಕಣ್ಣಿಗೆ ಏನನ್ನೋ ಎರಚಿದರು. ನಾನು ಪ್ರಜ್ಞಾಹೀನನಾದ ಬಳಿಕ ತಮ್ಮ ಕಾರಿನಲ್ಲಿ ಹಾಕಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಬಳಿಕ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಸಂತ್ರಸ್ತ ಯುವಕ ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಕುಡಿದ ಮತ್ತಿನಲ್ಲಿದ್ದ ನಾಲ್ವರು ಯುವತಿಯರು ಒಬ್ಬರ ಮೇಲೊಬ್ಬರಂತೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ನನಗೂ ಸಹ ಬಲವಂತದಿಂದ ಮದ್ಯ ಕುಡಿಸಿ ಹಲ್ಲೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಬಳಿಕ ನನ್ನನ್ನು ನಗರದ ಯಾವುದೋ ಸ್ಥಳದಲ್ಲಿ ಬಿಟ್ಟು ಆ ಯುವತಿಯರು ಪರಾರಿಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಆತ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾನೆ.

ಈ ಘಟನೆ ತಿಳಿಯುತ್ತಿದ್ದಂತೆಯೇ ಪಂಜಾಬ್ ಪೊಲೀಸ್ ಗುಪ್ತಚರ ಇಲಾಖೆ ಈ ಬಗ್ಗೆ ಸ್ವಯಂಪ್ರೇರಿತ ತನಿಖೆ ಪ್ರಾರಂಭಿಸಿದೆ. ಆದರೆ ಈ ಬಗ್ಗೆ ಯಾವುದೇ ವ್ಯಕ್ತಿ ದೂರು ನೀಡಿಲ್ಲ. ತನ್ನ ಮೇಲೆ ನಡೆದಿರುವ ಅತ್ಯಾಚಾರ ದೌರ್ಜನ್ಯದ ಬಗ್ಗೆ ಆತ ಮಾಧ‍್ಯಮಗಳಿಗೆ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ