ಕೋಲಾರ: ಜಿಲ್ಲೆ ಮಾಲೂರು ತಾಲೂಕಿನ ಬಾಳಗಾನಹಳ್ಳಿಯ ಸಮುದಾಯದ ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಸ್ತಿ ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ಇಂದು (ಜ.18) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿವಾನಂದ ಜಕ್ಕಣ್ಣನವರ್(24) ಆತ್ಮಹತ್ಯೆ ಮಾಡಿಕೊಂಡ ಸಮುದಾಯ ಆರೋಗ್ಯಾಧಿಕಾರಿ. ಮೂಲತಃ ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದ ಡಾ.ಶಿವಾನಂದ ಅವರು ಕಳೆದ 9 ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.