NEWSನಮ್ಮಜಿಲ್ಲೆರಾಜಕೀಯ

ಅಭಿವೃದ್ಧಿ ಮಾಡಿದ್ದರೆ ಕುಕ್ಕರ್‌ ಹಂಚುವ ಸ್ಥಿತಿ ಶಾಸಕ ರಘುಗೆ ಬರುತ್ತಿರಲಿಲ್ಲ: ಮೋಹನ್‌ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕರಾಗಿದಾಗಿನಿಂದಲೂ ಸರ್ ಸಿ.ವಿ.ರಾಮನ್‌ ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿದ ಶಾಸಕ ಎಸ್.ರಘು ಅವರು ಈಗ ಸೋಲಿನ ಭೀತಿಯಲ್ಲಿ ಕುಕ್ಕರ್‌ ಮೊರೆ ಹೋಗಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, “ಮತದಾರರಿಗೆ ಆಮಿಷವೊಡ್ಡಲು ಶಾಸಕ ಎಸ್.ರಘು ಅವರು ಹಲವು ಕಂಟೈನರ್‌ ವಾಹನಗಳಲ್ಲಿ ಕುಕ್ಕರ್‌ಗಳನ್ನು ತಂದು ಸಂಗ್ರಹಿಸಿ ಇಟ್ಟುಕೊಳ್ಳುತ್ತಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ನಿಂಬಂಧನೆಗಳ ಪ್ರಕಾರ ಇದು ಅಪರಾಧವಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕುಣಿಗಲ್‌ನಲ್ಲಿ ಇಂತಹದ್ದೇ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ ಸಿ.ವಿ.ರಾಮನ್‌ ಕ್ಷೇತ್ರದಲ್ಲೇಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

ಭಾರೀ ಪ್ರಮಾಣದಲ್ಲಿ ಆಮಿಷವೊಡ್ಡಲು ಸಜ್ಜಾಗುತ್ತಿರುವ ಶಾಸಕ ರಘು ಅವರಿಗೆ ಇದಕ್ಕೆಲ್ಲ ಹಣ ಎಲ್ಲಿಂದ ಬರುತ್ತಿದೆ? ಅವರಿಗೆ ಸಿಗುತ್ತಿರುವ ಸಂಬಳದಿಂದ ಇವೆಲ್ಲ ಸಾಧ್ಯವೇ? ಅಥವಾ 40% ಕಮಿಷನ್‌ ಹಣದಲ್ಲಿ ಆಮಿಷವೊಡ್ಡಿ ಚುನಾವಣೆ ಗೆದ್ದು ಮತ್ತಷ್ಟು ಕಮಿಷನ್‌ ಲೂಟಿ ಮಾಡುವ ಯೋಜನೆ ಇದೆಯಾ?

ಕ್ಷೇತ್ರದಲ್ಲಿ ಬಿಜೆಪಿ ವಿರೋಧಿ ಅಲೆಯಿರುವುದನ್ನು ಗಮನಿಸಿದ ಅವರು ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕೆಂದು ಎಲ್ಲ ಕುಟಿಲ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಜನರು ಕೊಟ್ಟ ಅಧಿಕಾರವನ್ನು ಜನರ ಹಿತಕ್ಕಾಗಿ ಬಳಸಿಕೊಂಡಿದ್ದರೆ ಅವರಿಗೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೋಹನ್‌ ದಾಸರಿ ಹೇಳಿದರು.

ಕ್ಷೇತ್ರದ ಮತದಾರರಿಗೆ ಹಂಚಲು ಎಸ್.ರಘು ತಂದಿರುವ ಕುಕ್ಕರ್‌ವೊಂದನ್ನು ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿ ಮಾತನಾಡಿದ ಮೋಹನ್‌ ದಾಸರಿ, ಬಿಜೆಪಿಯು ಅಧಿಕಾರಕ್ಕೆ ಬಂದಿರುವುದರ ಹಿಂದೆ ಇಂತಹ ಆಮಿಷಗಳು, ಸುಳ್ಳು ಭರವಸೆಗಳು, ಕೋಮುದ್ವೇಷದ ರಾಜಕೀಯ, ಆಪರೇಷನ್‌ ಕಮಲ ಮುಂತಾದ ಅನೇಕ ಕಳ್ಳಮಾರ್ಗಗಳಿವೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತಿದೊಡ್ಡ ಸವಾಲಾಗಿ ಬಿಜೆಪಿ ಪರಿಣಮಿಸಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಆಮಿಷಗಳಿಗೆ ಮರುಳಾಗದೇ, ಪ್ರಾಮಾಣಿಕ ಹಾಗೂ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಜನರು ಪಣತೊಡಬೇಕು ಎಂದು ಹೇಳಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ