NEWSನಮ್ಮರಾಜ್ಯರಾಜಕೀಯ

ಹ್ಯಾರಿಸ್‌ ಬೆಂಬಲಿಗ ಕೆಎಎಸ್‌ ಅಧಿಕಾರಿಯಿಂದ ಬೆದರಿಕೆ ಕರೆ: ಆಡಿಯೋ ಬಿಡುಗಡೆ ಮಾಡಿದ ಕೆ.ಮಥಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬಾರದೆಂದು ಶಾಸಕ ಎನ್‌.ಎ.ಹ್ಯಾರಿಸ್‌ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಕೆಎಎಸ್‌ ಅಧಿಕಾರಿ ಎಲಿಶ ಆ್ಯಂಡ್ರಿವ್ಸ್‌ರವರು ಬೆದರಿಕೆ ಹಾಕಿದ್ದಾರೆಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ವಕ್ತಾರ ಕೆ.ಮಥಾಯಿ ಆರೋಪಿಸಿದರು. ಎಲಿಶ ಆ್ಯಂಡ್ರಿವ್ಸ್‌ ಬೆದರಿಕೆ ಹಾಕಿರುವ ಆಡಿಯೋವನ್ನು ಸುದ್ದಿಗೋಷ್ಠಿಯಲ್ಲಿ ಕೆ.ಮಥಾಯಿ ಬಿಡುಗಡೆ ಮಾಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆ.ಮಥಾಯಿ, ಎಲಿಶ ಆ್ಯಂಡ್ರಿವ್ಸ್‌ ಎಂಬ ಕೆಎಎಸ್‌ ಅಧಿಕಾರಿ ಜನವರಿ 13ರ ಬೆಳಗ್ಗೆ 9 ಗಂಟೆಗೆ ನನಗೆ ಮೊಬೈಲ್‌ ಕರೆ ಮಾಡಿದರು. ಸುಮಾರು 15 ನಿಮಿಷ ಮಾತನಾಡಿದ ಅವರು ಶಾಸಕ ಎನ್‌.ಎ.ಹ್ಯಾರಿಸ್‌ ಹೆಸರನ್ನು ಅವರು ಹಲವು ಬಾರಿ ಉಲ್ಲೇಖಿಸಿ, ಅವರ ಪರವಾಗಿ ಮಾತನಾಡಿದ್ದಾರೆ.

ಶಾಂತಿನಗರ ಕ್ಷೇತ್ರದಿಂದ ನಾನು ಸ್ಪರ್ಧಿಸಬಾರದೆಂದು ಒತ್ತಡ ಹೇರಿದ್ದಲ್ಲದೇ, ಇದಕ್ಕೆ ಒಪ್ಪದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ. ಶಾಸಕರು ಚುನಾವಣಾ ಸೋಲಿನ ಭೀತಿಯಲ್ಲಿ ಈ ರೀತಿ ಅಧಿಕಾರಿಗಳಿಂದ ಕರೆ ಮಾಡಿಸುತ್ತಿರುವುದು ದುರಂತ ಎಂದರು.

ಕರ್ನಾಟಕ ಸರ್ಕಾರ ಹಾಗೂ ಭಾರತ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಯಾವುದೇ ಸರ್ಕಾರಿ ಅಧಿಕಾರಿಗಳು ಯಾವುದೇ ಪಕ್ಷದ ಯಾವುದೇ ವ್ಯಕ್ತಿಯ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ನಿಷಿದ್ಧ. ಆದ್ದರಿಂದ ಎಲಿಶ ಆ್ಯಂಡ್ರಿವ್ಸ್‌ ವಿರುದ್ಧ ಇಲಾಖಾ ತನಿಖೆ ನಡೆಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದರು.

ಇನ್ನು ಇಂತಹ ಬೆದರಿಕೆಗಳಿಗೆ ಹೆದರಿ ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನ್ನ ಇಡೀ ಜೀವನವನ್ನು ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಮುಡಿಪಾಗಿಟ್ಟಿದ್ದು, ಇದೇ ಸಿದ್ಧಾಂತ ಹೊಂದಿರುವ ಆಮ್‌ ಆದ್ಮಿ ಪಾರ್ಟಿಗಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು.

ಶಾಸಕ ಹ್ಯಾರಿಸ್‌ ಅವರು ಕ್ಷೇತ್ರದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಏನನ್ನೂ ಮಾಡಿಲ್ಲ. ಸರ್ಕಾರಿ ನಿವೇಶನಗಳು ಹಾಗೂ ಪಾರ್ಕ್‌ಗಳನ್ನು ಅತಿಕ್ರಮಣ ಮಾಡಿಕೊಂಡ ಶಾಸಕರು ಅವುಗಳನ್ನು ರಿಯಲ್‌ ಎಸ್ಟೇಟ್‌ ಆಗಿ ಪರಿವರ್ತಿಸಿಕೊಂಡಿದ್ದಾರೆ. ಡ್ಯಾನ್ಸ್‌ ಬಾರ್‌ಗಳು ಶಾಂತಿನಗರದ ಶಾಂತಿಗೆ ಭಂಗ ತರುತ್ತಿದೆ. ಡ್ರಗ್‌ ಮಾಫಿಯಾದಿಂದ ಇಲ್ಲಿನ ಯುವಕರ ಆರೋಗ್ಯ ಹಾಳಾಗುತ್ತಿದೆ ಎಂದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ