NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್ ಜತೆಗೆ ಹೊಂದಾಣಿಕೆ ಬೇಡ ಎಸ್‌ಟಿಎಸ್‌, ಪ್ರತಾಪ್ ಸಿಂಹಗೆ ವರಿಷ್ಠರಿಂದ ಎಚ್ಚರಿಕೆ: ಆರ್.ಟಿ.ಸತೀಶ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸುವ ಉದ್ದೇಶವನ್ನು ಹೊಂದಿದ್ದು ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಒಳ ಒಪ್ಪಂದ ಹಾಗೂ ವೇದಿಕೆಗಳನ್ನು ಹಂಚಿಕೊಳ್ಳಬಾರದು ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹಗೆ ಎಚ್ಚರಿಕೆಯ ಸಂದೇಶವನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಕುಡಿಯುವ ನೀರು ಹಾಗೂ ಒಳ ಚರಂಡಿ ಮಂಡಳಿ ನಿರ್ದೇಶಕ ಆರ್.ಟಿ.ಸತೀಶ್ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ಕಾಡುತ್ತಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ನೇತೃತ್ವದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಗಂಗೆ ಎಂಬ ಹೆಸರಿನಲ್ಲಿ ಪ್ರಾರಂಭಿಸಿ 2024 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಈ ಕೆಲಸಕ್ಕಾಗಿ ರೂ. 222.91 ಲಕ್ಷ ಕೋಟಿ ಅನುದಾನ ನೀಡಿ 97.91ಲಕ್ಷ ಕುಟುಂಬಗಳಿಗೆ ಈ ಯೋಜನೆ ರೂಪಿಸಲಾಗಿದ್ದು, ಈಗಾಗಲೇ 34.78 ಲಕ್ಷ ಕುಟುಂಬಗಳಿಗೆ ಗೃಹ ನಳ ಅಳವಡಿಸಿದ್ದು, 27.17 ಲಕ್ಷ ಮನೆಗಳು ಪ್ರಗತಿಯ ಹಾದಿಯಲ್ಲಿವೆ. ಅದರಲ್ಲಿ ಪಿರಿಯಾಪಟ್ಟಣ ತಾಲೂಕಿನಾದ್ಯಂತ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 302 ಕೋಟಿ ಹಣ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ನಮ್ಮ ಮೊದಲ ಶತ್ರು. ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಅರಳಿಸುವ ಉದ್ದೇಶದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದರು.

ಮಾಜಿ ಶಾಸಕ ಎಚ್.ಸಿ.ಬಸವರಾಜ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮ ಜ.21ರಿಂದ 29ರವರೆಗೆ ನಡೆಯಲಿದೆ ಎಂದರು.

ಮುಖಂಡರಾದ ಪಿ.ಜೆ.ರವಿ, ಲೋಕಪಾಲಯ್ಯ, ವಿಕ್ರಂ ರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ