NEWSನಮ್ಮರಾಜ್ಯರಾಜಕೀಯ

ಬಿಜೆಪಿಯ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮುಚ್ಚಿಡಲು ಪ್ರಧಾನಿಯನ್ನು ತಹಸೀಲ್ದಾರ್‌ ಮಟ್ಟಕ್ಕಿಳಿಸಿದ ಬೊಮ್ಮಾಯಿ: ಭಾಸ್ಕರ್ ರಾವ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಹಸೀಲ್ದಾರ್‌ಗಳಿಂದ ವಿತರಣೆಯಾಗಬೇಕಿದ್ದ ಹಕ್ಕುಪತ್ರಗಳನ್ನು ಚುನಾವಣಾ ಪ್ರಚಾರದ ದೃಷ್ಟಿಯಿಂದ ಪ್ರಧಾನಿ ಮೂಲಕ ಕೊಡಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾಸ್ಕರ್‌ ರಾವ್‌, ತಾಂಡ ಹಾಗೂ ಹಟ್ಟಿಗಳಲ್ಲಿ ವಾಸವಿರುವ ಬುಡಕಟ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಕೆಲಸ ಬಹಳ ಹಿಂದೆಯೇ ಆಗಬೇಕಿತ್ತು. ಇದು ತಹಸೀಲ್ದಾರ್‌ ಮಟ್ಟದ ಕೆಲಸವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ತನಕ ಕಾಯುವ ಅಗತ್ಯವಿರಲಿಲ್ಲ ಎಂದರು.

ಇನ್ನು ಜನಪರ ಆಡಳಿತ ನೀಡಲು ವಿಫಲವಾಗಿರುವ ಬಿಜೆಪಿ ಸರ್ಕಾರವು ಪ್ರಚಾರ ಗಿಟ್ಟಿಸಿಕೊಳ್ಳಲು ಹಕ್ಕುಪತ್ರ ವಿತರಣೆಗೂ ಚುನಾವಣೆ ತನಕ ಕಾದಿರುವುದು ದುರಂತ. ದೊಡ್ಡ ಪ್ರಮಾಣದಲ್ಲಿ ಹಕ್ಕು ಪತ್ರ ವಿತರಣೆಯನ್ನು ಇಷ್ಟು ದಿನ ಬಾಕಿ ಉಳಿಸಿಕೊಂಡು ಪ್ರಧಾನಿಯವರಿಂದ ಕೊಡಿಸಿರುವುದು ಕೇವಲ ಪ್ರಚಾರ ಪಡೆಯುವ ಗಿಮಿಕ್ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ರಾಜ್ಯ ಭೇಟಿ ವೇಳೆ ಗಮನ ಹರಿಸುವಂತೆ ಹೇಳಿದ್ದರು. ಬೆಂಗಳೂರಿನ ಕಳಪೆ ಮೂಲಸೌಕರ್ಯಗಳು, ಉತ್ತರ ಕರ್ನಾಟಕದ ಅಭಿವೃದ್ಧಿ, ಕನ್ನಡಕ್ಕಾಗುತ್ತಿರುವ ಅನ್ಯಾಯಗಳು.

ಇನ್ನು  ಗಡಿ ವಿವಾದಗಳು, ನದಿ ನೀರು ಹಂಚಿಕೆ ವಿವಾದಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ 40% ಕಮಿಷನ್‌ ದಂಧೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ಸರ್ಕಾರದ ದಿವ್ಯ ನಿರ್ಲಕ್ಷ್ಯ, ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಬಾಕಿ – ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಭೇಟಿಯನ್ನು ಬಳಸಿಕೊಳ್ಳುವಂತೆ ಆಮ್‌ ಆದ್ಮಿ ಪಾರ್ಟಿ ಒತ್ತಾಯಿಸಿತ್ತು. ಆದರೆ ಪ್ರಧಾನಿಯವರ ಭೇಟಿಯು ಚುನಾವಣಾ ಗಿಮಿಕ್‌ಗಳಿಗೆ ಸೀಮಿತವಾಗಿದೆ ಎಂದು ಭಾಸ್ಕರ್‌ ರಾವ್‌ ಬೇಸರ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬಿ.ಟಿ.ನಾಗಣ್ಣ ಮಾತನಾಡಿ, ಸರ್ಕಾರದ ಅನೇಕ ವೈಫಲ್ಯಗಳಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಪರಿಣಾಮವಾಗಿ ಬಿಜೆಪಿ ಬೆಂಬಲಿಗರನ್ನು ಜನಸಾಮಾನ್ಯರು ಗೇಲಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಓಲೈಸಿಕೊಂಡು ಕುರ್ಚಿ ಭದ್ರ ಮಾಡಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಡಬಲ್‌ ಇಂಜಿನ್‌ ಸರ್ಕಾರದ ಲಾಭ ಪಡೆದು, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಬೊಮ್ಮಾಯಿ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...