NEWSನಮ್ಮಜಿಲ್ಲೆರಾಜಕೀಯ

ಕಣ್ಣೂರು ಗ್ರಾಪಂ ಅಧ್ಯಕ್ಷರಾಗಿ ಶಬಾನ ಖಾನಂ, ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಹನೂರು: ತಾಲೂಕಿನ ಕಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಣ್ಣೂರು ಗ್ರಾಮದ ಶಬಾನ ಖಾನಂ ಮತ್ತು ಉಪಾಧ್ಯಕ್ಷರಾಗಿ ರತ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ಹಿಂದೆ ಇದ್ದ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಅಧ್ಯಕ್ಷ ಸ್ಥಾನಕ್ಕೆ ಶಬಾನ ಖಾನಂ ಹಾಗೂ ಕಾಂತರಾಜು ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಮತ್ತು ಜ್ಯೋತಿ ಅವರು ನಾಮಪತ್ರ ಸಲ್ಲಿಸಿದ್ದರು.

ಅಂತಿಮವಾಗಿ ಶಬಾನ ಖಾನಂ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆಯಾಗಿರುವ ಬಗ್ಗೆ ಚುನಾವಣಾಧಿಕಾರಿ ರೇಷ್ಮೆ ಇಲಾಖೆಯ ಉಮೇಶ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಬಾನ ಖಾನಂ ಮಾತನಾಡಿ, ಪಂಚಾಯಿತಿಯ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಗಮನ ನೀಡುವುದಾಗಿ ತಿಳಿಸಿದರು.

ಗ್ರಾಮ ಪಂಚಾಯಿತಿ ಅವರಣದಲ್ಲಿ ಪಟಾಕಿ ಸಿಡಿಸುವ ಮೂಲಕ ಸಿಹಿ ಹಂಚಿಕೆ ವಿತರಣೆ ಮಾಡಿ ಸಂಭ್ರಮಿಸಿದರು. ಮಾಜಿ ಅಧ್ಯಕ್ಷೆ ಮಮತಾ ಮಲ್ಲಣ್ಣ, ಸದಸ್ಯರಾದ ರಮೇಶ್, ಕಾಂತರಾಜು, ಶಿವಮ್ಮ, ಸೋಮೇಶ್, ರಾಜಪ್ಪ, ಜ್ಯೋತಿ, ಪ್ರಕಾಶ್ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ