ಬೆಂಗಳೂರು: ಹಿರಿಯ ಪತ್ರಕರ್ತ ಎಂ. ಕೆ. ವಿದ್ಯಾರಣ್ಯ ಭಾನುವಾರ ತಡ ರಾತ್ರಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಚಿಕಿತ್ಸೆಗೆ ಸ್ಪಂದಿಸದೆ ತಡರಾತ್ರಿ ವಿಧಿವಶರಾದರು. ವಿದ್ಯಾರಣ್ಯರು ಮಂಡ್ಯದ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವಿದ್ಯಾರಣ್ಯಪುರ ಕೃಷ್ಣಮೂರ್ತಿಯವರ ಪುತ್ರ. ಕೃಷ್ಣಮೂರ್ತಿಯವರು ಸಹ ಪತ್ರಕರ್ತರು.
ವಿದ್ಯಾರಣ್ಯರು ಬೆಂಗಳೂರಿನ PTI ಸುದ್ದಿಸಂಸ್ಥೆಯಲ್ಲಿ ಮೂರು ದಶಕಕ್ಕೂ ಹೆಚ್ಚು ಕಾಲ ವರದಿಗಾರ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅವರಿಗೆ ಓರ್ವ ಪುತ್ರಿ ಮತ್ತು ಪುತ್ರ ಇದ್ದಾರೆ.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.