NEWS

ಆರೋಗ್ಯಯುತ ಜೀವನಕ್ಕೆ ಯೋಗ ರಹದಾರಿ : ಕಂದಾಯ ಸಚಿವ ಆರ್.ಅಶೋಕ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ : ರಕ್ತದೊತ್ತಡ,ಸಕ್ಕರೆ ಖಾಯಿಲೆ ನಿಯಂತ್ರಣ ಸೇರಿದಂತೆ ಆರೋಗ್ಯಯುತ ಜೀವನ ನಡೆಸಲು ಯೋಗಾಭ್ಯಾಸವು ರಹದಾರಿಯಾಗಿದೆ.ಸದೃಢ ಮನಸ್ಸು ಮತ್ತು ಆರೋಗ್ಯಕ್ಕೆ ಯೋಗಾಸನಗಳು ಪೂರಕ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಡಿಗೇನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಮಾಡಿ, ಇಂದು ಭಾನುವಾರ ಬೆಳಗ್ಗೆ ವಿದ್ಯಾರ್ಥಿಗಳ ಯೋಗ ಶಿಬಿರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.

ಸತತ ಯೋಗಾಭ್ಯಾಸದಿಂದ ಒತ್ತಡ ರಹಿತವಾದ ಆರೋಗ್ಯಯುತ ಜೀವನ ನಿರ್ವಹಿಸಬಹುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಯೋಗಾಸನಗಳಿಂದ ಏಕಾಗ್ರತೆ ಸಾಧ್ಯ‌. ನಾನು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕಬಡ್ಡಿ ಆಟಗಾರನಾಗಿದ್ದೆ ಹೀಗಾಗಿ ಈವರೆಗೂ ಬಳಿ ರಕ್ತದೊತ್ತಡ, ಮಧುಮೇಹ ಸುಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಪ್ರತಿನಿತ್ಯ ಯೋಗಾಭ್ಯಾಸ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.

ಸನ್ಮಾನ: ಮೊರಾರ್ಜಿ ದೇಸಾಯಿ ವಸತಿ ಪ.ಪೂ.ಕಾಲೇಜು ಪ್ರಾಚಾರ್ಯ ಕಿರಣ ಕುಮಾರ್, ವಿದ್ಯಾರ್ಥಿಗಳಿಗೆ ಉಚಿತ ಯೋಗಾಭ್ಯಾಸ ತರಬೇತಿ ನೀಡುವ ಆನಂದ್ ಅವರನ್ನು ಸಚಿವರು ಸನ್ಮಾನಿಸಿದರು.

ವಸತಿ ಕಾಲೇಜಿನಲ್ಲಿ ವಾಸ್ತವ್ಯದ ನೆನಪಿಗೆ ಸಚಿವರು ಸಸಿಗಳನ್ನು ನೆಟ್ಟರು. ಪೌರಾಡಳಿತ, ಸಣ್ಣ ಕೈಗಾರಿಕೆ,ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು (ಎಂಟಿಬಿ), ಜಿಲ್ಲಾಧಿಕಾರಿ ಆರ್.ಲತಾ
ಮತ್ತಿತರರು ಇದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ