NEWSಕೃಷಿನಮ್ಮರಾಜ್ಯ

ಕಾಡು ಪ್ರಾಣಿಗಳ ಹಾವಳಿ, ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ : ಕುರುಬೂರು ಶಾಂತಕುಮಾರ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾಡು ಪ್ರಾಣಿಗಳ ಹಾವಳಿ, ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ, ನಿತ್ಯ ಗ್ರಾಮೀಣ ಭಾಗದ ಜನರ ಪ್ರಾಣಬಲಿ ಕಾರಣವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದಾರೆ.

ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯಾದ್ಯಂತ ಕಾಡನ್ನು ತೊರೆದು ನಾಡಿಗೆ ಬರುತ್ತಿರುವ ಪ್ರಾಣಿಗಳ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಚಿರತೆ, ಆನೆ, ಹುಲಿ, ಹಂದಿ ನವಿಲು, ಜಿಂಕೆಗಳ ಕಾಟದಿಂದ ರೈತ ಕುಟುಂಬಗಳ ಪ್ರಾಣ ಬಲಿ, ಬೆಳೆ ಹಾನಿಯಾಗಿ ಕಷ್ಟ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಕಾಡು ಪ್ರಾಣಿಗಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡವ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತಾಗಬೇಕು. ಅದಕ್ಕೆ ನಿಯಂತ್ರಣ ವಿಧಿಸಲು ರಾಜ್ಯಮಟ್ಟದಲ್ಲಿ ಪರಿಣಿತರ ಉನ್ನತ ಮಟ್ಟದ ಸಮಿತಿ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮೈಸೂರು ಜಿಲ್ಲೆಯ 23 ರೈತರಿಗೆ ಜೋಳ ಖರೀದಿಸಿದ ತಮಿಳುನಾಡು ಖರೀದಿದಾರರಿಂದ ಮೂರೂವರೆ ಕೋಟಿ ರೂಪಾಯಿ ಪಂಗನಾಮ, ರೈತರು ಹೆಚ್ಚಿನ ಬೆಲೆ ಕೊಡುತ್ತಾರೆ ಎಂದು ಪರಿಚಯವಿಲ್ಲದ ವ್ಯಕ್ತಿಗಳಿಗೆ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ ರೈರಿಗೆ ಮೋಸ ಮಾಡಿರುವವರನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಜಾರಿಯಾದ ಪರಿಣಾಮ ಈ ರೀತಿಯ ಘಟನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಸರ್ಕಾರ ಕಬ್ಬಿಗೆ 150ರೂ. ಹೆಚ್ಚುವರಿ ಮಾಡಿ ಆದೇಶ ಹೊರಡಿಸಿ 25 ದಿನ ಕಳೆದರೂ ಸಕ್ಕರೆ ಕಾರ್ಖಾನೆಗಳು ರೈತರಿಗೆ ಹೆಚ್ಚುವರಿ ಹಣ ಯಾಕೆ ಪಾವತಿಸುತ್ತಿಲ್ಲ, ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೃಷಿ ಪಂಪಶೆಟ್ಟಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರು ಕಂಗಾಲಾಗಿದ್ದಾರೆ, ರಾತ್ರಿ ಪಾಳಿಯಲ್ಲಿ ಕೊಡುವುದನ್ನು ನಿಲ್ಲಿಸಿ, ಹಗಲು ವೇಳೆಯಲ್ಲಿ ವಿದ್ಯುತ್ ನೀಡಬೇಕು, ಕಾಡು ಪ್ರಾಣಿಗಳಿಂದ ರೈತರ ಜೀವ ಹಾನಿ ತಪ್ಪಿಸಲು ಈ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ರೂಪಿಸುವ ಬಗೆ ಪ್ರಧಾನಿ ಮೋದಿ ಅವರು ಭರವಸೆ ನೀಡಿ ಒಂದು ವರ್ಷವಾದರೂ ಜಾರಿ ಮಾಡದೆ ಇರುವ ಬಗ್ಗೆ ಚರ್ಚಿಸಿ ದೇಶಾದ್ಯಂತ ಪ್ರಬಲ ಹೋರಾಟ ರೂಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘಟನೆ ರಾಜಸ್ಥಾನದ ಹನುಮಾನ್ ಗುಡ್ಡಲ್ಲಿ ಫೆಬ್ರವರಿ 6, 7 ಮತ್ತು 8 ರಂದು ರಾಷ್ಟ್ರೀಯ ರೈತ ಮುಖಂಡರ ಸಭೆ ನಡೆಸಲಿದ್ದೆವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರ್ ಶಂಕರ, ಲಕ್ಷ್ಮಿಪುರ ವೆಂಕಟೇಶ್, ಕುರುಬೂರುಸಿದ್ದೇಶ್, ಕೆಂಡಗಣಸ್ವಾಮಿ, ಕಮಲಮ್ಮ, ಮಂಜುನಾಥ್, ಶ್ರಿರಾಮ ಮುಂತಾದವರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು