Breaking NewsNEWS

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇನ್ನಾರು ದಿನಗಳೊಳಗೆ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ: ವಕೀಲ ಶಿವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್‌ನಲ್ಲಿ ಅತೀ ಇದೇ ಜ.30ರೊಳಗೆ ಅರ್ಜಿಸಲ್ಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ. ಶಿವರಾಜು ತಿಳಿಸಿದ್ದಾರೆ.

ಕಳೆದ 2020ರ ಜನವರಿ 1ರಿಂದ ಅಂದರೆ ಸರಿ ಸುಮಾರು 3ವರ್ಷ ಒಂದು ತಿಂಗಳ ಹಿಂದೆಯೇ ನಾಲ್ಕೂ ನಿಗಮಗಳ ಅಧಿಕಾರಿಗಳಿಗೆ ಮತ್ತು ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತು ನೌಕರರು ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಿಲ್ಲದೆ ದುಡಿಯುತ್ತಿದ್ದಾರೆ. ಹೀಗಾಗಿ ಅವರ ವೇತನ ಪರಿಷ್ಕರಣೆಗಾಗಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ವಿವರವಾಗಿ ಸುಮಾರು 60 ಪುಟಗಳನ್ನೊಳಗೊಂಡ ಈ ಅರ್ಜಿಯನ್ನು ಸಿದ್ಧಪಡಿಸಿದ್ದು, ಹೈ ಕೋರ್ಟ್‌ಗೆ ಹಾಕುವುದೊಂದೆ ಬಾಕಿ ಇದೆ ಎಂದು ವಿಜಯಪಥಕ್ಕೆ  ಶಿವರಾಜು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ