ನಮ್ಮಜಿಲ್ಲೆಶಿಕ್ಷಣ-

ಬಾಲಕಾರ್ಮಿಕಳ ರಕ್ಷಸಿ ಬಾಲಮಂದಿರಕ್ಕೆ ದಾಖಲಿಸಿದ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಬಾಪೂಜಿ ನಗರದ ಮನೆಯೊಂದರಲ್ಲಿ 14 ವರ್ಷದ ಬಾಲಕಿಯನ್ನು ಸುಮಾರು 5 ತಿಂಗಳಿಂದ ಮನೆ ಕೆಲಸಕ್ಕೆ ನೇಮಿಸಿಕೊಂಡಿರುವುದನ್ನು ಪತ್ತೆಹಚ್ಚಿ, ರಕ್ಷಣೆ ಮಾಡಲಾಗಿದೆ.

ಮಕ್ಕಳ ಸಹಾಯವಾಣಿ ದೂರಿನ ಮೇರೆಗೆ ಮಂಗಳವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿ ಬಾಲಕಿಯ ಪೋಷಣೆ ಮತ್ತು ರಕ್ಷಣೆಗಾಗಿ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.

ಮಾಲೀಕರಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ಅರಿವು ಮೂಡಿಸಿ, ಮಾಲೀಕರ ವಿರುದ್ದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.

ರಕ್ಷಣಾ ತಂಡದಲ್ಲಿ ಕಾರ್ಮಿಕ ಅಧಿಕಾರಿ ಎಂ.ಪಿ ವಿಶ್ವನಾಥ, ಕಾರ್ಮಿಕ ನಿರೀಕ್ಷಕ ಪಿ ಭೀಮೆಶ್, ಯೋಜನಾ ನಿರ್ದೇಶಕ ರಘುನಾಥ ಎ.ಎಸ್, ಇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪುನಿತ್ ಕುಮಾರ್, ಸಿ.ಆರ್.ಪಿ. ಎಚ್ ರಾಜೇಶ್, ಆಪ್ತ ಸಮಾಲೋಚಕ ಅಶೋಕ್  ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ