ಬೆಂಗಳೂರು: ರಾಜಧಾನಿಯ ಕುಮಾರಪಾರ್ಕ್ ವೆಸ್ಟ್‌ನಲ್ಲಿರುವ ಆಮ್ ಆದ್ಮಿ ಪಾರ್ಟಿಯ ರಾಜ್ಯ ಮುಖ್ಯ ಕಚೇರಿಯಲ್ಲಿ ಧ್ವಜಾರೋಹಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ, ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ 74ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಆಚರಣೆ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ, “1950ರ ಈ ದಿನದಂದು ಪ್ರಜೆಗಳ ಹಕ್ಕುಗಳ ರಕ್ಷಣೆ ಆರಂಭವಾಯಿತು. ಆಮ್ ಆದ್ಮಿ ಪಾರ್ಟಿಯ ಉದ್ದೇಶ ಕೂಡ ಇದೇ ಆಗಿದ್ದು, ತಮ್ಮ ಹಕ್ಕುಗಳು ಏನೆಂದು ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ ಹಾಗೂ ಅವರಿಗೆ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸುತ್ತಿದ್ದೇವೆ.
ನಮ್ಮ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರ “ಮೇಕ್ ಇಂಡಿಯಾ ನಂಬರ್ ಒನ್” ಎಂಬ ಕನಸನ್ನು ನನಸಾಗಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಭಾಸ್ಕರ್ ರಾವ್, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಲಕ್ಷ್ಮೀಕಾಂತ್ ರಾವ್, ಬಿ.ಎಸ್.ಬೆನಕನಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ್ ಸವ್ಹಾನಿ ಮತ್ತಿತರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.