NEWSನಮ್ಮಜಿಲ್ಲೆ

ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯ ಅಕ್ರಮ ಒತ್ತುವರಿ ತೆರವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಮಾಡಲಾಗಿದೆ.

ದೊಡ್ಡಾನೆಕುಂದಿ ವಾರ್ಡ್‌ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡ (ಜಿ + 4, ಜಿ + 3 ಹಾಗೂ ಜಿ + 2 ಕಟ್ಟಡ)ಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ + 2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಹೂಡಿ ವಾರ್ಡ್ ಸಾದರ ಮಂಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಇಂದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

ತೆರವು ಕಾರ್ಯಾಚರಣೆಯ ವೇಳೆ 1 ಹಿಟಾಚಿ, 1 ಜೆಸಿಬಿ, 1 ಗ್ಯಾಸ್ ಕಟರ್, 1 ಟ್ರ್ಯಾಕ್ಟರ್, 10 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ವಿವರ: ಮಹದೇವಪುರ ವಲಯಕ್ಕೆ ಸಂಬಂಧಿಸಿದಂತೆ ತಹಲ್ ವರೆಗೆ 289 ಸರ್ವೇ ನಂಬರ್‌ಗಳಲ್ಲಿ ಒತ್ತುವರಿ ಇರುವುದು ಕಂಡುಬಂದಿದೆ. ಇವುಗಲ್ಲಿ ಇಲ್ಲಿಯವರೆಗೆ 81 ಸಂಖ್ಯೆಯ ಸರ್ವೇ ನಂಬರ್‌ಗಳಲ್ಲಿ ಎಲ್ಲ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಅದರಲ್ಲಿ 157 ಸರ್ವೇ ನಂಬರ್‌ಗಳನ್ನು ಭೂ ಮಾಪನ ಮಾಡಲಾಗಿದ್ದು,

28 ಆದೇಶಗಳನ್ನು ಹೊರಡಿಸಲಾಗಿದೆ. ಈ ಪೈಕಿ ಸಂಬಂಧ ಪಟ್ಟ ಪಾಲಿಕೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅದರಂತೆ ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...