NEWSವಿಜ್ಞಾನ

ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್‌ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಗೆದ್ದಲು ಹಿಡಿದು ಬ್ಯಾಂಕ್‌ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಹುಡಿಹುಡಿಯಾಗಿರುವ ಘಟನೆ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ ಜರುಗಿದೆ.

ಈ ಸಂಬಂಧ ಹಣ ಹಾನಿಗೊಳಗಾಗಿರುವ ಗ್ರಾಹಕರು ಈ ಸಂಬಂಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.

ಸಫಲ್‌ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷದಿಗಾಗಿ ದುಡ್ಡು ತೆಗೆಯಲು ಲಾಕರ್‌ತೆರೆದಿದ್ದಾರೆ. ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದು, ಈ ವೇಳೆ ಹಣ ಹಾಳಾಗಿರುವುದು ಗೊತ್ತಾಗಿದೆ.

ಹೇಗಾಯಿತು?: ಬ್ಯಾಂಕ್‌ಲಾಕರ್ ಮಳೆನೀರಿನಲ್ಲಿ ನೆನೆದ ಸ್ಥಿತಿಯಲ್ಲಿತ್ತು. ಹೀಗಾಗಿ ದುಡ್ಡು ಸಂಪೂರ್ಣವಾಗಿ ಕಪ್ಪಾಗಿ ಹುಡಿ ಹುಡಿಯಾಗಿ ಗೆದ್ದಲು ಹಿಡಿದು ಚೂರುಚೂರಾಗಿ ಬಿದ್ದಿದೆ. ಲಾಕರ್‌ನಲ್ಲಿ ಇಟ್ಟಿದ್ದ ಪೂರ್ತಿ ಎಂಟು ಲಕ್ಷ ರೂ. ದುಡ್ಡು ಇದೇ ರೀತಿ ಆಗಿದೆ.

ಆದರೆ, ಆರ್‌ಬಿಐ ನಿಯಮದ ಪ್ರಕಾರ ಹಣವನ್ನು ಲಾಕರ್‌ನಲ್ಲಿ ಇಡುವಂತಿಲ್ಲ, ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಗಾಬರಿಗೊಂಡಿರುವ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಹೋಗಿ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.

ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ, ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್‌ಎಂಬ ನಂಬಿಕೆಯಿದೆ. ಇನ್ನು ನಿರ್ವಹಣೆ ಕೊರತೆಯಿಂದ ಈ ರೀತಿ ಸಮಸ್ಯೆಯಾದರೆ ಹೊಣೆ ಯಾರು ಎಂಬ ಪ್ರಶ್ನೆ ಮೂಡುತ್ತಿದೆ.

Advertisement
ವಿಜಯಪಥ - vijayapatha.in
Deva
the authorDeva

Leave a Reply

error: Content is protected !!