NEWSನಮ್ಮಜಿಲ್ಲೆಸಂಸ್ಕೃತಿ

ಮಲೆಮಹದೇಶ್ವರ ಬೆಟ್ಟ: 1.33 ಕೋಟಿ ರೂ. ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಹನೂರು: ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ಕಾಣಿಕೆ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1.33 ಕೋಟಿ ರೂ. ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಗ್ಗೆ ಸಿಸಿ ಕ್ಯಾಮೆರಾ ಕಣ್ಣಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಹುಂಡಿಗಳನ್ನು ಬೀಗ ತೆಗೆದು ಹಣವನ್ನು ಎಣಿಸುವ ಕಾರ್ಯ ಮಾಡಲಾಯಿತು.

ಈ ಬಾರಿ ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು. ಕಳೆದ 22 ದಿನಗಳ ಅವಧಿಯಲ್ಲಿ 1,33,37, 871 ರೂ., 38 ಗ್ರಾಂ ಚಿನ್ನ ಹಾಗೂ 1600 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು, ಮ.ಬೆಟ್ಟ ಪೊಲೀಸ್ ಸಿಬ್ಬಂದಿ, ಪ್ರಾಧಿಕಾರದ ಸಿಬ್ಬಂದಿ ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ