ಹನೂರು : ಗ್ರಾಮೀಣ ಭಾಗದಲ್ಲಿ ಮಾಸಾಶನದಿಂದ ವಂಚಿತರಾಗಿರುವ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ಪಿಂಚಣಿ ದೊರಕಿಸಿಕೊಡುವ ಉದೇಶದಿಂದ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದೆ ಎಂದು ಗ್ರೇಡ್ 2ತಹಸೀಲ್ದಾರ್ ಧನಂಜಯ್ ತಿಳಿಸಿದ್ದಾರೆ.
ಶುಕ್ರವಾರ ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರ ದೊಡ್ಡಿ ಗ್ರಾಮದಲ್ಲಿ ಆಯೋಜಿಸಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಧ್ಯವರ್ತಿಗಳ ನಡುವೆ ಸಿಲುಕಿ ಹಣ ವೆಚ್ಚ ಮಾಡಿಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ. ಹೀಗಾಗಿ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ 20 ಅರ್ಜಿಗಳು ಸ್ವೀಕೃತಿಗೊಂಡಿದ್ದು ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.
ಪ್ರೋಭೇಷನರಿ ತಹಸೀಲ್ದಾರ್ ಮಂಜುನಾಥ್, ಶಿರಸ್ತೇದಾರ್ ನಾಗೇಂದ್ರ, ಗ್ರಾಮ ಪಂಚಾಯಿತಿ, ಸದಸ್ಯರಾದ ಸೈಯದ್ ಜಬ್ಬರ್, ರಾಜಮಣಿ ಶಿವಣ್ಣ ರವರು , ರಾಜಸ್ವ ನಿರೀಕ್ಷಕರಾದ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷ ರಾದ ರಾಜು, ಗ್ರಾಮ ಆಡಳಿತ ಅಧಿಕಾರಿ ವಿನೋದ್, ಕಂದಾಯ ಇಲಾಖಾ ಸಿಬ್ಬಂದಿ ಗ್ರಾಮಸ್ಥರು ಇದ್ದರು.