Please assign a menu to the primary menu location under menu

NEWSಉದ್ಯೋಗನಮ್ಮಜಿಲ್ಲೆ

ಖಾಲಿ ಇರುವ ಜಿಲ್ಲಾ, ತಾಲೂಕು ಮಟ್ಟದ ಹುದ್ದೆಗಳಿಗೆ ನೇರಗುತ್ತಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು 21 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ವಿದ್ಯಾರ್ಹತೆ: ಪದವಿ ಅಥವಾ ಸರ್ಟಿಫಿಕೇಶನ್/ ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಇನ್‌ಫರ್ಮೆಷನ್ ಟೆಕ್ನಾಲಜಿ. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು, ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರತಕ್ಕದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಲು ಸಿದ್ದರಿರಬೇಕು.

ತಾಲೂಕು ಮಟ್ಟದಲ್ಲಿ ದೇವನಹಳ್ಳಿ ಮತ್ತು ನೆಲಮಂಗಲ ತಾಲೂಕು ಸಂಯೋಜಕರು-02, ವಿದ್ಯಾರ್ಹತೆ: ಪದವಿಧರರಾಗಿರಬೇಕು. ಕಂಪ್ಯೂಟರ್ ಅಪ್ಲಿಕೇಶನ್ ನಿರ್ವಹಣೆಯಲ್ಲಿ/ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು, ಸ್ಥಳೀಯ ಹಾಗೂ ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರತಕ್ಕದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಹಾಗೂ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.

ಪೋಷಣ್ ಅಭಿಯಾನ ಯೋಜನೆಯಡಿ ತಾಲೂಕು ಮಟ್ಟದಲ್ಲಿ ಯೋಜನಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದು ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಮಾನದಂಡಗಳ ಪ್ರಕಾರ ಅರ್ಹರಿದ್ದಲ್ಲಿ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2023ರ ಮಾರ್ಚ್ 09 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787445. ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...