CRIMENEWSನಮ್ಮಜಿಲ್ಲೆ

ಮಡಿಕೇರಿ: ಹೋಮ್ ಸ್ಟೇ ನಿರ್ವಾಹಕನ ವಿಕೃತಿಯಿಂದ ಇನ್ನಿಲ್ಲದ ಹಿಂಸೆ ಅನುಭವಿಸಿದ ಪ್ರವಾಸಿಗರು

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಹೋಮ್ ಸ್ಟೇ ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ ತೆರಳಿದ್ದ ಪ್ರವಾಸಿಗರು ಇನ್ನಿಲ್ಲದ ಹಿಂಸೆ ಅನುಭವಿಸಿದ್ದಾರೆ. ಈ ಸಂಬಂಧ ಮಡಿಕೆರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರಾತ್ರಿಯಿಡಿ ಹಿಂಸೆ ನೀಡಿದೆ ಇಬ್ಬರನ್ನು ಪೊಲೀಸರು ಬಂಧಿಸಿ ಕಂಬಿಹಿಂದೆ ತಳ್ಳಿದ್ದಾರೆ.

ಬೆಂಗಳೂರು ಮೂಲದ ಮಮತಾ ಎಂಬುವರು ತಮ್ಮ ಮಗಳ ಜೊತೆ ಸಮಯ ಸಿಕ್ಕಾಗಲೆಲ್ಲ ಪ್ರವಾಸ ಹೋಗುವುದನ್ನು ಹವ್ಯಾಸವಾಗಿಸಿಕೊಂಡಿದ್ದು, ಅದರಂತೆ ಈ ಬಾರಿ ಊಟಿಗೆ ತೆರಳಿ ಬಳಿಕ ಮಡಿಕೇರಿಯಲ್ಲಿ ಕೆಲವು ದಿನಗಳ ಕಾಲ ತಂಗಲು ಬಂದಿದ್ದರು.

ಹೀಗಾಗಿ ಮಡಿಕೇರಿ ನಗರದ ಈಶ್ವರ ನಿಲಯ ಎಂಬ ಹೋಂ ಸ್ಟೇಯಲ್ಲಿ ಶನಿವಾರ (ಏ.5) ರ ರಾತ್ರಿ ತಂಗಿದ್ದರು. ಈ ವೇಳೆ ನಸುಕಿನ ಜಾವ 3 ಗಂಟೆ ಸುಮಾರಿಗೆ ಹೋಂಸ್ಟೇ ನಿರ್ವಾಹಕ ಪ್ರವೀಣ್ ಎಂಬಾತ ತನ್ನ ಮತ್ತೊಬ್ಬ ಸಹಚರನೊಂದಿಗೆ ಬಂದು ಮಮತಾ ಅವರು ಇದ್ದ ಕೋಣೆಯ ಬಾಗಿಲು ಬಡಿದಿದ್ದಾನೆ. ಬಾಗಿಲು ತೆಗೆಯುವಂತೆ ಕಿರುಚಿದ್ದಾನೆ. ಇಬ್ಬರು ಮಹಿಳೆಯರೇ ಇದ್ದಿದ್ದರಿಂದ ಅವರು ಬಾಗಿಲು ತಗೆದಿಲ್ಲ.

ಆದರೆ, ಹಠ ಬಿಡದ ಪ್ರವೀಣ್ ನಾಲ್ಕು ಗಂಟೆಯವರೆಗೂ ಬಾಗಿಲು ಬಡಿದು ಬೆದರಿಕೆ ಹಾಕಿದ್ದಾನೆ. ಬಾಗಿಲು ತಗೆಯದೆ ಇದ್ದರೇ ಬಾಗಿಲು ಮುರಿದು ಒಳಗೆ ಬರುವುದಾಗಿ ಬೆದರಿಸಿದ್ದಾನೆ. ಮಮತಾ ತೀವ್ರ ಭಯಗೊಂಡು ಬಾಗಿಲನ್ನು ಇನ್ನಷ್ಟು ಭದ್ರ ಮಾಡಿಕೊಂಡು ತೆಗೆಯದೆ ಒಳಗೇ ಉಳಿದಿದ್ದಾರೆ.

ಇನ್ನು ಬೆಳಕಾದ ಮೇಲೆ ಬಾಗಿಲು ತೆಗೆದು ಹೊರಗೆ ಬಂದು ತಮ್ಮ ಕಾರನ್ನು ನೋಡಿರೆ ಕಾರಿನ ನಾಲ್ಕೂ ಚಕ್ರಗಳನ್ನು ಡ್ಯಾಮೇಜ್ ಮಾಡಿ ಗಾಳಿ ತೆಗೆದಿದ್ದಾರೆ ಕಿರಾತಕರು. ಇದರಿಂದಲೂ ಕೋಪಗೊಂಡ ಮಮತಾ, ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಪ್ರವೀಣ್ ಮತ್ತು ಆತನ ಸಹಚರ ಬಾಬು ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇನ್ನು ಹೋಂಸ್ಟೇ ಮಾಲೀಕ ಕಾವೇರಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಇತ್ತ ಆರೋಪಿ ಪ್ರವೀಣ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಮೇಲೆ ಈಗಾಗಲೇ ರೌಡಿಶೀಟರ್​ ತೆರೆಯಲಾಗಿದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ತಿಳಿಸಿದ್ದಾರೆ. ಸದ್ಯ, ಈ ಹೋಂಸ್ಟೇಯ ಲೈಸೆನ್ಸ್​ ರದ್ದತಿ ಮಾಡಲು ಪೊಲಿಸ್ ಇಲಾಖೆ ಪ್ರವಾಸೋಧ್ಯಮ ಇಲಾಖೆಗೆ ಪತ್ರ ಬರೆದಿದೆ.

ಇನ್ನು ಕೊಪ್ಪಳದಲ್ಲಿ ಪ್ರವಾಸಿಗರ ಮೇಲೆ ದೌರ್ಜನ್ಯ ನಡೆದ ಬಳಿಕ ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಗರಿಷ್ಟ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೂಚಿಸಿದ್ದರು. ಪ್ರವಾಸಿಗರಿಗೆ ಹೋಂಸ್ಟೇ ನಿರ್ವಾಹಕರು ಈ ರೀತಿ ಹಿಂಸೆ ನೀಡಿದ್ರೆ ಪ್ರವಾಸಕ್ಕೆ ಬರುವುದಾದರೂ ಹೇಗೆ ಎಂಬ ಪ್ರಶ್ನೆ ಪ್ರವಾಸಿಗರನ್ನು ಕಾಡುತ್ತಿದೆ.

Deva
the authorDeva

Leave a Reply

error: Content is protected !!
Latest news
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ