NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಬಸ್‌ನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟ್‌ ಮೇಲೆ ಕುಡಿದ ಮತ್ತಿನಲ್ಲಿ ಮೂತ್ರ ವಿಸರ್ಜನೆ – ಪ್ರಕರಣ ದಾಖಲಿಸಲು ಸಂಸ್ಥೆ ಚಿಂತನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಆತನ ವಿರುದ್ಧ ಕೆಎಸ್‌ಆರ್‌ಟಿಸಿ ದೂರು ದಾಖಲಿಸಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಫೆಬ್ರುವರಿ 21 ರಂದು ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿ ಕೃತ್ಯ ಎಸಗಿದ್ದರು.

ಕೆಎಸ್‌ಆರ್‌ಟಿಸಿ ಗುರುವಾರ ನೀಡಿರುವ ಪ್ರಕಟಣೆಯಲ್ಲಿ, ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ ಪಡೆಯಲು ಚಾಲಕ ಮತ್ತು ನಿರ್ವಾಹಕರು ಪ್ರಯತ್ನಿಸಿದ್ದಾರೆ. ಆದರೆ, ಆರೋಪಿ ಕ್ಷಮೆಯಾಚಿಸಿದ್ದು, ತನ್ನ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿಲ್ಲ. ಮಹಿಳಾ ಪ್ರಯಾಣಿಕರು ದೂರು ದಾಖಲಿಸಲು ನಿರಾಕರಿಸಿದ್ದರಿಂದ ಬಸ್ ನಿಗದಿತ ಪ್ರಯಾಣ ಮುಂದುವರಿಸಿತು ಎಂದು ತಿಳಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಬ್ಬಳ್ಳಿ ನಗರ ಸಮೀಪದ ಕಿರೇಸೂರಿನಲ್ಲಿ ರಾತ್ರಿ ಊಟಕ್ಕೆ ಬಸ್ ನಿಲ್ಲಿಸಿದಾಗ 20 ವರ್ಷದ ಮಹಿಳೆಯ ಸೀಟಿನ ಮೇಲೆ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಯುವತಿ ಆಹಾರ ಸೇವಿಸಲು ಇಳಿದು ಹಿಂದಿರುಗಿದಾಗ ಆರೋಪಿ ತನ್ನ ಸೀಟಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಕಂಡು ಕೂಗಿದ್ದಾರೆ. ಘಟನೆ ನಡೆದಾಗ ಬಸ್‌ ಖಾಲಿಯಾಗಿತ್ತು, ಗದ್ದಲ ಕೇಳಿ ಜನರು ಧಾವಿಸಿದರು ಎನ್ನಲಾಗಿದೆ.

ಇನ್ನು ಈ ಘಟನೆ ಕುರಿತು ಕೆಎಸ್‌ಆರ್‌ಟಿಸಿ ಅಧಿಕೃತ ಸ್ಪಷ್ಟನೆ ನೀಡಿದ್ದು, ದೂರು ಸ್ವೀಕರಿಸಿದ ಬಳಿಕ ಮಂಗಳೂರು ಡಿಪೋ 2, ಬಸ್‌ ನಂ. ಕೆಎ 19 ಎಫ್‌ 3554 ಚಾಲಕ ಸಂತೋಷ ಮಠಪತಿ ಹಾಗೂ ವಿಜಯಪುರ-ಮಂಗಳೂರು ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಉಮೇಶ್ ಕರಡಿ ಅವರ ಹೇಳಿಕೆಗಳನ್ನು ಪಡೆಯಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಬರ್ತ್ ಸಂಖ್ಯೆ 3 ಮತ್ತು ಬರ್ತ್ ಸಂಖ್ಯೆ 29 ರಲ್ಲಿ ಕಾಯ್ದಿರಿಸದ ಪ್ರಯಾಣಿಕರಿದ್ದರು ಎಂದು ಕಂಡುಬಂದಿರುವುದಾಗಿ ತಿಳಿಸಿದೆ.

ಬಸ್‌ ಸಿಬ್ಬಂದಿ ಕಿರೇಸೂರು ಹೋಟೆಲ್‌ನಲ್ಲಿ ರಾತ್ರಿ 10.30ಕ್ಕೆ ನಿಗದಿತ ಉಪಾಹಾರ ಮತ್ತು ಪ್ರಕೃತಿ ಕರೆಗೆ ವಿರಾಮ ನೀಡಿದರು ಮತ್ತು 15-20 ನಿಮಿಷಗಳ ವಿರಾಮದ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದರು. ಬಿಡುವಿನ ವೇಳೆಯಲ್ಲಿ ಬರ್ತ್ ಸಂಖ್ಯೆ 29 ರಲ್ಲಿ ಪ್ರಯಾಣಿಸುತ್ತಿದ್ದ ಕಾಯ್ದಿರಿಸದ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ಬಸ್‌ನಿಂದ ಹೊರಬರುವ ಬದಲು ಬರ್ತ್ ಸಂಖ್ಯೆ 3ರ ಬಳಿ ಹೋಗಿ ಸೀಟ್ ನಂಬರ್ 3 ರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿದೆ.

ಅದನ್ನು ಬಸ್ ಹತ್ತುವ ಮಹಿಳಾ ಪ್ರಯಾಣಿಕರು ತಮ್ಮ ಸೀಟಿನಲ್ಲಿ ಆತ ಮೂತ್ರ ವಿಸರ್ಜಿಸುತ್ತಿರುವುದನ್ನು ನೋಡಿದ್ದಾರೆ. ಬಳಿಕ ಚಾಲಕ, ನಿರ್ವಾಹಕರು ಮತ್ತು ಇತರ ಪ್ರಯಾಣಿಕರು ಮದ್ಯದ ಅಮಲಿನಲ್ಲಿದ್ದ ಪ್ರಯಾಣಿಕನನ್ನು ಬಸ್‌ನಿಂದ ಇಳಿಸಿ ಹೋಟೆಲ್ ಬಳಿ ಬಿಟ್ಟರು.

ಬರ್ತ್ ಸಂಖ್ಯೆ 3 ಅನ್ನು ಡ್ರೈವರ್ ಮತ್ತು ಕಂಡಕ್ಟರ್ ನೀರಿನಿಂದ ತೊಳೆದು ಬಟ್ಟೆಯಿಂದ ಒರೆಸಿದರು ಮತ್ತು ಮಹಿಳಾ ಪ್ರಯಾಣಿಕರಿಗೆ ಬರ್ತ್ ಸಂಖ್ಯೆ 9 ರಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದರು ಎಂದಿರುವ ಕೆಎಸ್ಆರ್‌ಟಿಸಿ, ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಆರೋಪ ಸರಿಯಲ್ಲ ಎಂದು ಸ್ಪಷ್ಟಪಡಿಸಿದೆ.

ಘಟನೆ ನಂತರ ಬಸ್ ಸಿಬ್ಬಂದಿ ಮಹಿಳಾ ಪ್ರಯಾಣಿಕರಿಗೆ ಭದ್ರತೆ ಮತ್ತು ಸುರಕ್ಷತೆಯ ಭರವಸೆ ನೀಡಿದ್ದರು ಮತ್ತು ಸಹಾಯ ಮಾಡಿದರು ಎಂದು ಮೂಲಗಳು ತಿಳಿಸಿವೆ. ಘಟನೆಯ ನಂತರ ಮಹಿಳಾ ಪ್ರಯಾಣಿಕರು ಆಘಾತಕ್ಕೊಳಗಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆರೋಪಿಯು, ಸ್ಥಿಮಿತವನ್ನು ಕಳೆದುಕೊಂಡು ಸಹ ಪ್ರಯಾಣಿಕರು ಹಾಗೂ ಬಸ್ಸಿನ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದ. ಆದರೆ, ಸಂತ್ರಸ್ತ ಮಹಿಳೆ ಈ ಬಗ್ಗೆ ಪೊಲೀಸ್ ದೂರು ನೀಡಲು ನಿರಾಕರಿಸಿದ್ದಾರೆ. ಸಂತ್ರಸ್ತ ಮಹಿಳೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಇನ್ನು ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಸಂದೇಶ ನೀಡಲು ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಸಂಸ್ಥೆಯ ಅಧಿಕಾರಿಗಳು ಚಿಂತಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ