ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದ ಬಳಿ ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ್ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಕೋಲಾದಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಅವಘಡ ಸಂಬಂಧ ಪ್ರಕರಣ ದಾಖಲಾಗಿದೆ.