NEWSನಮ್ಮಜಿಲ್ಲೆಶಿಕ್ಷಣ-

ಕರಾಮುವಿ: ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ – ಸಾರಿಗೆ ನೌಕರರ ಮಕ್ಕಳಿಗೆ ಶುಲ್ಕದಲ್ಲಿ ರಿಯಾಯಿತಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರಾಮುವಿ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.

18 ವರ್ಷದಿಂದ 80 ವರ್ಷ ವಯೋಮಾನದ ವರಗಿನ 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು.

ಕರಾಮುವಿಯು ಪ್ರಸಕ್ತ 2022-23ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ (General, IT, Home Science)., ಎಂ.ಎ/ ಎಂ.ಸಿ.ಜೆ/ ಎಂ.ಕಾಂ (Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಡಿಪ್ಲೋಮಾ., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್‌ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾಲಯವಾಗಿದೆ. ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ.

ಸೂಚನೆ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ‌., ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ., ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಮತ್ತು KSRTC/ BMTC/ NWKSRTC/ KKSRTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಿಗೆ ಭೋಧನ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.

ಮುಖ್ಯವಾಗಿ ಕೋವಿಡ್‌ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ., ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ಇರುತ್ತದೆ.

ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್. ತಿಳಿಸಿದ್ದಾರೆ‌.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ