CrimeNEWSದೇಶ-ವಿದೇಶ

ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ : ಐವರು ಮೃತ, 7ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹೊಸೂರು: ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸುಗೂಸು ಸೇರಿ ಒಂದೇ ಕುಟುಂಬದ 5 ಮಂದಿ ಧಾರುಣವಾಗಿ ಮೃತಪಟ್ಟಿರುವುದು ಕೃಷ್ಣಗಿರಿ ಜಿಲ್ಲೆ ಎರ್ರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

ಮುನಿಸ್ವಾಮಿ (50), ವರ್ಷಿಣಿ (3 ತಿಂಗಳು) ಮುತ್ತು (20) ಮಲ್ಲಿ (65) ವಸಂತಿ (45) ಮೃತರು. ಘಟನೆಯಲ್ಲಿ 7 ಮಂದಿ ತೀವ್ರ ಗಾಯಗೊಂಡಿದ್ದು, ಕೃಷ್ಣಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಕರಪುಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧರ್ಮಪುರಿ ಜಿಲ್ಲೆ ಸೋಲೂರು ಗ್ರಾಮದ ಒಂದೇ ಕುಟುಂಬದ 12 ಮಂದಿ ಕೂಲಿ ಕಾರ್ಮಿಕರು ಆಂಧ್ರಪ್ರದೇಶದ ಕೊತ್ತುಕೋಟೆಯಲ್ಲಿ ಕೃಷಿ ಕೆಲಸಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಶಿವಕಾಶಿಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ.

ಅಪಘಾತದಿಂದಾಗಿ ಟ್ರ್ಯಾಕ್ಟರ್ ಅಡಿ ಸಿಲುಕಿದ ಕೂಲಿಕಾರ್ಮಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಹಾವೇರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ