NEWS

ದೆಹಲಿಯ ಶಿಕ್ಷಣ ಕ್ರಾಂತಿ ಸಹಿಸದ ಕೇಂದ್ರ ಸರ್ಕಾರದಿಂದ ಸಿಸೋಡಿಯಾ ಬಂಧನ: ಪೃಥ್ವಿ ರೆಡ್ಡಿ ತೀವ್ರ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿಯಲ್ಲಿ ಮಾಡಿರುವ ಶಿಕ್ಷಣ ಕ್ರಾಂತಿ ಸಹಿಸದ ಕೇಂದ್ರ ಸರ್ಕಾರ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್‌ ಸಿಸೋಡಿಯಾ ಅವರನ್ನು ಬಂಧಿಸುವ ಹುನ್ನಾರ ನಡೆಸುವ ಮೂಲಕ ವಿಕೃತಿ ಮೆರೆದಿದೆ ಎಂದು ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿಯು ಸಿಸೋಡಿಯಾ ಅವರನ್ನು ಬಂಧಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಸಿಸೋಡಿಯಾ ಅವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುದನ್ನು ಅರಿತಿರುವ ಬಿಜೆಪಿಯು ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ನೀಡುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಮ್‌ ಆದ್ಮಿ ಪಾರ್ಟಿ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಚುನಾವಣೆಯ ಪ್ರಚಾರಕ್ಕೆ ಮನೀಷ್‌ ಸಿಸೋದಿಯಾ ಆಗಮಿಸಿ, ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಕೇಂದ್ರ ಸರ್ಕಾರವು ಸಿಬಿಐ ಮೂಲಕ ಅವರನ್ನು ಬಂಧಿಸಿದೆ. ದೇಶ ಹಾಗೂ ಜನರಿಗೋಸ್ಕರ ಕೇವಲ ಬಂಧನ ಮಾತ್ರವಲ್ಲ, ಪ್ರಾಣ ನೀಡಲೂ ನಾವುಗಳು ಸಿದ್ಧವಿದ್ದೇವೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ದೆಹಲಿ ಸರ್ಕಾರದ ಶಿಕ್ಷಣ ಕ್ರಾಂತಿಯನ್ನು ಕಂಡು ಅನೇಕ ವಿದೇಶಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಬಿಜೆಪಿಗೆ ಮಾತ್ರ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರಾಗಿ ಮನೀಷ್‌ ಸಿಸೋಡಿಯಾ ಅವರು ಬರೋಬ್ಬರಿ 25,000ಕ್ಕೂ ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿಯು ಈ ರೀತಿ ಕೀಳುಮಟ್ಟದ ಕುತಂತ್ರ ಮಾಡುತ್ತಿರುವುದು ಖಂಡನೀಯ. ಗಿಡವು ಚಿವುಟಿದಷ್ಟೂ ಚಿಗುರುವಂತೆ ಆಮ್‌ ಆದ್ಮಿ ಪಾರ್ಟಿ ಕೂಡ ಬಿಜೆಪಿ ತೊಂದರೆ ನೀಡಿದಷ್ಟೂ ಹೆಚ್ಚಿನ ವೇಗದಲ್ಲಿ ಬೆಳೆಯಲಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್