NEWSನಮ್ಮರಾಜ್ಯಸಂಸ್ಕೃತಿ

ಮಾ.13 ರಿಂದ 16 ರವರೆಗೆ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ

ವಿಜಯಪಥ ಸಮಗ್ರ ಸುದ್ದಿ

ಹನೂರು: ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ದಿನಾಂಕ ನಿಗದಿಗೊಳಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಹನೂರು ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳ ಆರಾಧ್ಯ ದೇವಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವು ಮಾ.13 ರಿಂದ 16 ರವರೆಗೆ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಂಗದ ತೋಟಿಯ ಮೂಲಕ ಪಟ್ಟಣದಾದ್ಯಂತ ತಮಟೆ ಹೊಡೆಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಮಧ್ಯಾಹ್ನ ದೇಗುಲದ ಆವರಣದಲ್ಲಿ ಜಮಾವಣೆಗೊಂಡ ಪಟ್ಟಣದ ವಿವಿಧ ಕೋಮಿನ ಮುಖಂಡರು ದೇವಿಗೆ ಹಾಗೂ ತಮಟೆಗೆ ಪೂಜೆ ನೆರವೇರಿಸಿದರು. ಬಳಿಕ ತಮಟೆಯನ್ನು ಪಟ್ಟಣ ನಿವಾಸಿಗಳಿಂದ ನೇಮಿಸಲ್ಪಟ್ಟ ರಂಗದತೋಟಿಗೆ ಹಸ್ತಾಂತರಿಸಲಾಯಿತು.

ರಂಗದತೋಟಿ ಪಟ್ಟಣದಾದ್ಯಂತ ಸಂಚರಿಸಿ ಮುಂದಿನ 15 ದಿನಗಳಲ್ಲಿ ದೇವಿಯ ಜಾತ್ರೆ ನಡೆಯಲಿದ್ದು ಪ್ರತಿಯೊಬ್ಬರೂ ಸಜ್ಜಾಗುವಂತೆ ಕರೆ ನೀಡಿದರು.

ವಿಶೇಷ ಪೂಜೆ: ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡುವ ಹಿನ್ನಲೆಯಲ್ಲಿ ಬೆಳಗ್ಗೆ 5ರಲ್ಲಿ ದೇವಿಗೆ ಹಾಲು, ಮೊಸರು, ಜೇನುತುಪ್ಪ, ಎಳನೀರು, ಪನ್ನೀರು, ಗಂಧ ಸೇರಿದಂತೆ ವಿಶೇಷ ಅಭಿಷೇಕಗಳು ವಿಧಿ ವಿಧಾನಗಳೊಂದಿಗೆ ನೆರವೇರಿಸಲಾಯಿತು.

ದೇವಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇಗುಲದ ವತಿಯಿಂದ ಅನ್ನದಾಸೋಹ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ