NEWSನಮ್ಮಜಿಲ್ಲೆ

ಜನಪರ ಕಾಳಜಿ, ದೂರದೃಷ್ಟಿ ಇಲ್ಲದ ಬಿಬಿಎಂಪಿ ಬಜೆಟ್‌, ಹಣ ಕೊಳ್ಳೆ ಹೊಡೆಯುವುದಕ್ಕೆ ರಹದಾರಿಯಂತಿದೆ: ಮೋಹನ್‌ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಜನಪರ ಕಾಳಜಿ, ದೂರದೃಷ್ಟಿ ಇಲ್ಲದಂತಹ ಬಿಬಿಎಂಪಿ ಆಯವ್ಯಯವನ್ನು ಮಂಡಿಸಲಾಗಿದ್ದು, ಹಣವನ್ನು ಕೊಳ್ಳೆ ಹೊಡೆಯುವುದೊಂದೇ ಇದರ ಉದ್ದೇಶವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

ಇಂದು ಬೆಳಗ್ಗೆ ಟೌನ್ ಹಾಲ್‌ಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್ ಅವರ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಉಪಸ್ಥಿತಿಯಲ್ಲಿ ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ ಅವರು ಮಂಡಿಸಿದ “ಬಿಬಿಎಂಪಿಯ 2023-24ನೇ ಸಾಲಿನ ಆಯವ್ಯಯವನ್ನು ಗಮನಿಸಿದರೆ, ರಾಜ್ಯದ ಸಚಿವರು ಹಾಗೂ ಶಾಸಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಲೆಂದೇ ಬಜೆಟ್‌ ಮಂಡಿಸಿರುವುದು ಸ್ಪಷ್ಟವಾಗುತ್ತದೆ ಎಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಮೋಹನ್‌ ದಾಸರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಯಾವುದೇ ಹೊಸ ಯೋಜನೆಗಳು ಈ ಬಜೆಟ್‌ನಲ್ಲಿ ಇಲ್ಲ. ಶಾಲೆಗಳು ಹಾಗೂ ಆಸ್ಪತ್ರೆಗಳ ನಿರ್ಮಾಣ ಯೋಜನೆಗಳ ಕುರಿತೂ ಈ ಬಜೆಟ್‌ನಲ್ಲಿ ಪ್ರಸ್ತಾಪ ಇಲ್ಲದಿರುವುದು ವಿಪರ್ಯಾಸ. ಕೋವಿಡ್‌ ಮಹಾಮಾರಿಯನ್ನು ನೋಡಿದ ನಂತರವೂ ಆರೋಗ್ಯ ಕ್ಷೇತ್ರವನ್ನು ನಿರ್ಲಕ್ಷಿಸಿರುವುದು ಖಂಡನೀಯ. ಬೆಂಗಳೂರಿನ ಬಹುದೊಡ್ಡ ಸಮಸ್ಯೆಯಾಗಿರುವ ರಸ್ತೆಗುಂಡಿಗಳಿಗೆ ಪರಿಹಾರ ಕಂಡುಕೊಳ್ಳುವುದರಲ್ಲಿಯೂ ಬಜೆಟ್‌ ವಿಫಲವಾಗಿದೆ ಎಂದರು.

ಮುಂದಿನ ವರ್ಷಗಳಲ್ಲಿ ಬೆಂಗಳೂರು ಯಾವ ರೀತಿ ಬೆಳೆಯಲಿದೆ ಎಂಬ ಮಾಹಿತಿಯನ್ನು ಆಧರಿಸಿ, ಅದಕ್ಕೆ ಈಗೇನು ಮಾಡಬೇಕು ಎಂದು ಯೋಚಿಸಿ ಬಜೆಟ್‌ ಮಂಡಿಸಬೇಕು.

ಆದರೆ, ಹೆಚ್ಚುತ್ತಿರುವ ಬೆಂಗಳೂರಿನ ಜನಸಂಖ್ಯೆಗೆ ಅನುಗುಣವಾಗಿ ನೀರಿನ ವ್ಯವಸ್ಥೆ, ರಸ್ತೆಗಳು, ಶಾಲೆಗಳು, ಆಸ್ಪತ್ರೆಗಳು ಮುಂತಾದ ಮೂಲಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ತೀವ್ರ ನಿರ್ಲಕ್ಷ್ಯ ತೋರುತ್ತಿದೆ.

ಇದು 40% ಕಮಿಷನ್‌ ಹೊಡೆದು,  ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿಯು ಈ ಬಜೆಟ್‌ ಬಳಸಿಕೊಂಡಿರುವುದು ದುರದೃಷ್ಟಕರ ಎಂದು ಹೇಳಿದರು.

ಬಿಎಂಪಿಗೆ ಚುನಾವಣೆ ನಡೆದು ಎಂಟು ವರ್ಷಗಳಾಗಿದ್ದರೂ, ಸದ್ಯದಲ್ಲೇ ಚುನಾವಣೆ ನಡೆಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ನೀಡಲಿ. ಯಾವಾಗ ಚುನಾವಣೆ ನಡೆದರೂ ಬಿಜೆಪಿ ಸೋಲುವುದು ನಿಶ್ಚಿತವಾಗಿದೆ. ಇದನ್ನು ಅರಿತಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಕುಂಟು ನೆಪಗಳನ್ನು ಹುಡುಕಿಕೊಂಡು ಮುಖಭಂಗವನ್ನು ಮುಂದೂಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮೋಹನ್‌ ದಾಸರಿ ಹೇಳಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...