CrimeNEWSದೇಶ-ವಿದೇಶ

ವೈದ್ಯೆಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರ, ನಗ್ನ ಚಿತ್ರಗಳ ಹರಿಬಿಟ್ಟ ಪುರುಷ ನರ್ಸ್‌ ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಕೊಯಂಬತ್ತೂರು: ಕಳೆದ 2022ರ ಡಿಸೆಂಬರ್‌ನಲ್ಲಿ ಕರ್ನಾಟಕದ ಮೈಸೂರು ನಗರದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ಪುರುಷ ನರ್ಸ್ ( Male nurse)ನನ್ನು ಕೋಯಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ.

ಮೂತಃ ತ್ರಿಶ್ಶೂರ್‌ ಜಿಲ್ಲೆಯವನಾಗಿರೋ ಆರೋಪಿ ನಿಶಾಂತ್ ಬಾಬು (24) ಎಂಬಾತನೆ ಪೊಲೀಸರ ವಶದಲ್ಲಿರುವ ಆರೋಪಿ. ಸಂತ್ರಸ್ತ ವೈದ್ಯೆ ಮತ್ತು ನಿಶಾಂತ್ ಇಬ್ಬರೂ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಯ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನೆಂದು ಆರೋಪಿಸಲಾಗಿದ್ದು, ವೈದ್ಯೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ವೈದ್ಯೆಗೆ ಕೊಯಂಬತ್ತೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಮೊದಲು ಇಬ್ಬರು ಕೂಡ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆ ವೇಳೆ ಮೊದಲ ಬಾರಿಗೆ ಆಕೆ ಮೇಲೆ ನಿಶಾಂತ್ ಬಾಬು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಆಕೆಯನ್ನು ಕೋಯಿಕ್ಕೋಡ್‌ಗೆ ಕರೆದುಕೊಂಡು ಬಂದಿದ್ದ. ಅಲ್ಲಿಯೂ ಲಾಡ್ಜ್‌ನಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಈ ವೇಳೆ ವೈದ್ಯೆಯ ಬೆತ್ತಲೆ ಚಿತ್ರಗಳನ್ನು ಸೆರೆಹಿಡಿದಿದ್ದು, ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದ. ಅಲ್ಲದೆ ಬ್ಲ್ಯಾಕ್‌ಮೇಲ್ ಮಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ಮೈಸೂರಿನ ಅನೇಕ ಲಾಡ್ಜ್‌ಗಳಲ್ಲಿ ಆಕೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಆರೋಪಿಯ ಕಿರುಕುಳ ತಾಳಲಾರದೆ ಆತನ ಮೊಬೈಲ್‌ ನಂಬರ್‌ಅನ್ನು ವೈದ್ಯೆ ಬ್ಲಾಕ್ ಮಾಡಿದ್ದರು. ಆ ನಂತರ ಆತ ವೈದ್ಯೆಯ ನಗ್ನ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ. ಇದರ ಬೆನ್ನಲ್ಲೇ ಆಘಾತಕ್ಕೊಳಗಾದ ವೈದ್ಯೆ ಕೋಯಿಕ್ಕೋಡ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಿಶಾಂತ್‌ ಬಾಬುವನ್ನು ಬಂಧಿಸಿದ್ದಾರೆ.

ಅಲ್ಲದೆ ಆತನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 67 ಎ (ಲೈಂಗಿಕ ದೌರ್ಜನ್ಯದ ಕೃತ್ಯದ ಅಂಶಗಳನ್ನು ವಿದ್ಯುನ್ಮಾನ ಮಾದರಿಯಲ್ಲಿ ಪ್ರಕಟಿಸಿದ ಅಥವಾ ವಿತರಿಸಿದ ಅಪರಾಧಕ್ಕೆ ಶಿಕ್ಷೆ) ಅಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿ ಪೊಲೀಸರ ಕಸ್ಟಡಿಯಲ್ಲಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ