CrimeNEWSನಮ್ಮಜಿಲ್ಲೆ

ನಂಜನಗೂಡು: ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ – ಆರೋಪಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಯುವಕನೊಬ್ಬನ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹೇಶ್(27) ಕೊಲೆಯಾದವ. ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬಾತನೇ ಕೃತ್ಯ ಎಸಗಿದ ಆರೋಪಿ.

ಆಟೋದಲ್ಲಿ ಕುಳಿತಿದ್ದ ಮಹೇಶ್ ಬಳಿ ಗಿರೀಶ್ (32) ಬಂದು ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ. ಈ ವೇಳೆ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹೇಶನನ್ನು ನೋಡಿದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.

ಕೂಡಲೇ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮಹೇಶ್ ಮೃತಪಟ್ಟಿದ್ದಾನೆ.

ಮಹೇಶ್‌ ಹೋಟೆಲ್ ಒಂದರಲ್ಲಿ ಕೆಲಸಮಾಡುತ್ತಿದ್ದ. ಅದೇ ಗ್ರಾಮದಲ್ಲಿ ಆರೋಪಿ ಗಿರೀಶ್ ಕೂಡ ಕಟಿಂಗ್ ಶಾಪ್‌ನಲ್ಲಿ ಕೆಲಸಮಾಡುತ್ತಿದ್ದ ಎನ್ನಲಾಗಿದೆ. ಹುಲ್ಲಹಳ್ಳಿ ಪೊಲೀಸರು ಹಾಗೂ ಡಿವೈಎಸ್ಪಿ ಗೋವಿಂದರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಆರೋಪಿ ಗಿರೀಶ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್, ವೃತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿ ಕಟ್ಟಿ ಭೇಟಿ ನೀಡಿ, ಪರಿಶೀಲಿಸಿದರು. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ