CrimeNEWS

ಇಂದು ನಸುಕಿನ ಜಾವ ಹೊತ್ತು ಉರಿದ ಬಿಎಂಟಿಸಿ ಬಸ್‌ – ಬಸ್‌ನಲ್ಲೇ ಮಲಗಿದ್ದ ನಿರ್ವಾಹಕ ಸಜೀವ ದಹನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ ಒಂದು ಹೊತ್ತು ಉರಿದ ಪರಿಣಾಮ ಬಸ್‌ನಲ್ಲೇ ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.

ಮುತ್ತಯ್ಯಸ್ವಾಮಿ (45) ಮಲಗಿದ್ದಾಗಲೇ ಸಜೀವ ದಹನಗೊಂಡ ನಿರ್ವಾಹಕರು. ಇಂದು (ಮಾ.10) ನಸುಕಿನ ಸುಮಾರು 4.45ರ ವೇಳೆ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಇಡೀ ಬಸ್‌ಅನ್ನೇ ಆವರಿಸಿದೆ. ಈ ವೇಳೆ ಬಸ್​ನಲ್ಲೇ ನಿದ್ದೆಗೆ ಜಾರಿದ್ದ ಕಂಡಕ್ಟರ್ ಕಣ್ಣು ಬಿಡುವಷ್ಟರಲ್ಲೇ​ ಸುಟ್ಟು ಕರಕಲಾಗಿದ್ದಾರೆ.

ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೊತ್ತಿ ಉರಿದ ಬಸ್‌ನಲ್ಲಿ ಮಲಗಿದ್ದಾಗಲೇ ಸಜೀವ ದಹನಗೊಂಡ ನಿರ್ವಾಹಕ ಮುತ್ತಯ್ಯಸ್ವಾಮಿ.

ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್​ನಲ್ಲಿ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್​ನಲ್ಲಿ ​ ಬೆಂಕಿ ಕಾಣಿಸಿಕೊಂಡಿದೆ. ದುರ್ಘಟನೆಯಲ್ಲಿ ನಿರ್ವಾಹಕ ಮುತ್ತಯ್ಯಸ್ವಾಮಿ ಮೃತಪಟ್ಟಿದ್ದರೆ, ಅದೃಷ್ಟವಶಾತ್ ಬಸ್​ ​ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾರ್ಗ ಸಂಖ್ಯೆ- 243/1, ಸುಮ್ಮನಹಳ್ಳಿ ಘಟಕ-31ರ ಬಸ್​ನಲ್ಲಿ ಮುತ್ತಯ್ಯಸ್ವಾಮಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ರೂಟ್​ ಮುಗಿಸಿ ಲಿಂಗಧೀರನಹಳ್ಳಿ ಬಸ್​ ನಿಲ್ದಾಣದಲ್ಲಿ ಹಾಲ್ಟ್‌ ಆಗಿದ್ದರು. ಬಸ್​ನಲ್ಲೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಆದರೆ, ಚಾಲಕ ಬೆಳಗ್ಗೆ ಎದ್ದು ಶೌಚಾಲಯಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ.

ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೊತ್ತಿ ಉರಿದ ಬಸ್‌.

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದ್ದು, ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬಿಎಂಟಿಸಿ ಮಾಧ್ಯಮ ಪ್ರಕಟಣೆ: ಇನ್ನು ಈ ಬಗ್ಗೆ ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇಂದು ಬೆಳಗ್ಗೆ ಸುಮಾರು 4.45 ರ ಸಮಯದಲ್ಲಿ ಘಟಕ 31 ಅನುಸೂಚಿ ಸಂಖ್ಯೆ 243L/1, ಲಿಂಗಧೀರನಹಳ್ಳಿ ರಾತ್ರಿ ತಂಗುವ​ KA 57 F, 2069 ಸಂಖ್ಯೆ ಬಸ್​. ಚಾಲಕ ಪ್ರಕಾಶ್ , ನಿರ್ವಾಹಕ‌ ಮುತ್ತಯ್ಯ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ರಾತ್ರಿ ತಂಗಲು ಅಲ್ಲಿಯೇ ಸ್ಥಳವಿದ್ದು, ಚಾಲಕ ತಂಗುವ ಸ್ಥಳದಲ್ಲಿ ಮಲಗಿದ್ದಾರೆ.

ಆದರೆ‌‌ ನಿರ್ವಾಹಕ ತಾವು ಬಸ್‌ ನಲ್ಲಿಯೇ ಮಲಗುವುದಾಗಿ ತಿಳಿಸಿರುವುದಾಗಿ ಚಾಲಕ ಹೇಳಿಕೆ ನೀಡಿದ್ದಾರೆ. ತಂಗುವ ಸ್ಥಳದಲ್ಲಿ ಮಲಗಿದ್ದರಿಂದ ಬೆಂಕಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿಲ್ಲ ಎಂದು ಚಾಲಕ ತಿಳಿಸಿದ್ದಾರೆ.

ಬೆಂಕಿ ಹತ್ತಿರುವುದನ್ನು ನೋಡಿ ಬೀಟ್ ಪೊಲೀಸರು ತಕ್ಷಣ ಅಗ್ನಿಶಾಮಕದವರಿಗೆ ತಿಳಿಸಿ‌ ಬೆಂಕಿ‌ ನಂದಿಸಲು ಪ್ರಯತ್ನ ಮಾಡಿದ್ದಾಗ್ಯೂ ದುರದೃಷ್ಟವಶಾತ್ ನಿರ್ವಾಹಕ ಬದುಕುಳಿಯಲಿಲ್ಲ. ಸಂಸ್ಥೆಯು ತೀವ್ರ ಸಂತಾಪವನ್ನು ಸೂಚಿಸುತ್ತದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿದ್ದಾರೆ. ನಿರ್ವಾಹಕರ ಕುಟುಂಬದವರಿಗೆ ಮಾಹಿತಿ‌ ನೀಡಲಾಗಿದೆ. ಪೊಲೀಸರು ಮುಂದಿನ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಬಿಎಂಪಿಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೊತ್ತಿ ಉರಿದ ಬಸ್‌.

ಹಲವು ಅನುಮಾನ: ಯಾರೋ ಕಿಡಿಗೇಡಿಗಳು ಈ ಕೃತ್ಯ ಮಾಡಿರಬಹುದು, ಡೀಸೆಲ್ ಕದಿಯಲು ಹೋಗಿ ಸಂಭವಿಸಿರಬಹುದು. ಈ ಬಗ್ಗೆ ತೀವ್ರ ತನಿಖೆ ನಡೆದರೆ ಸತ್ಯ ತಿಳಿಯಲಿದೆ ಎಂದು ಸಂಸ್ಥೆಯ ನೌಕರರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಇದು ಮುಂದಿನ ದಿನಗಳಲ್ಲಿ ಎಲ್ಲರಿಗೂ ಎಚ್ಚರಿಕೆ ಗಂಟೆ. ಸರ್ಕಾರ ಇದಕ್ಕೆ ಯಾವುದೇ ತರಹ ಗಮನ ಹರಿಸುತ್ತಿಲ್ಲ. ರಾತ್ರಿ ಪಾಳಿಯಲ್ಲಿ ನಿರ್ವಾಹಕರಿಗೆ ವಸತಿ, ನೀರು ಸೌಕರ್ಯ ಇರುವುದಿಲ್ಲ. ಅದರ ಪರಿಣಾಮ ಈಗ ನಮ್ಮ ಸಹೋದ್ಯೋಗಿಯೊಬ್ಬರನ್ನು ಕಳೆದುಕೊಂಡಿದ್ದೇವೆ ಎಂದು ನೌಕರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ