NEWSನಮ್ಮರಾಜ್ಯರಾಜಕೀಯಸಿನಿಪಥ

ಆಮ್‌ ಆದ್ಮಿ ಪಾರ್ಟಿಗೆ ಗುಬ್ಬಿ ವೀರಣ್ಣ ಮರಿಮೊಮ್ಮಗಳು ಸುಷ್ಮಾ ವೀರ್‌ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖ್ಯಾತ ರಂಗಭೂಮಿ ಕಲಾವಿದರಾದ ಗುಬ್ಬಿ ವೀರಣ್ಣ ಅವರ ಮರಿಮೊಮ್ಮಗಳು ಹಾಗೂ  ಗಾಯಕಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ.ಜಯಶ್ರೀ ಅವರ ಮಗಳಾದ ಸುಷ್ಮಾ ವೀರ್‌ ಅವರು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುಷ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪೃಥ್ವಿ ರೆಡ್ಡಿ, ಕಲಾವಿದರು ಹಾಗೂ ಸಾಧಕರ ಕುಟುಂಬದಲ್ಲಿ ಜನಿಸಿದ ಸುಷ್ಮಾ ವೀರ್‌ರವರು ಕೂಡ ಬಹುಮುಖ ಪ್ರತಿಭೆ ಹೊಂದಿದ್ದಾರೆ. ಅಭಿನಯ, ನೃತ್ಯ, ಗಾಯನ, ಚಿತ್ರಕಲೆ, ನಿರ್ದೇಶನ, ವಿನ್ಯಾಸ ಮುಂತಾದ ಹಲವು ವಿಷಯಗಳಲ್ಲಿ ಇವರು ಸಾಧನೆ ಮಾಡಿದ್ದಾರೆ ಎಂದರು.

ಉತ್ತಮ ಕಿರುಚಿತ್ರ ಹಾಗೂ ಚಲನಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ರಂಗಭೂಮಿಯಲ್ಲಿ ಪ್ರಯೋಗಾತ್ಮಕ ಹಾಗೂ ಸೃಜನಶೀಲ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಇಂತಹ ಸಾಧಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಗುಬ್ಬಿ ವೀರಣ್ಣ ಅವರ ಮರಿಮೊಮ್ಮಗಳು ಸುಷ್ಮಾ ವೀರ್‌ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಸುಷ್ಮಾ ವೀರ್‌ ಅವರು 2004ರಲ್ಲಿ ಆಕಾಂಕ್ಷ ಎಂಬ ಎನ್‌ಜಿಒ ಸ್ಥಾಪಿಸಿದ್ದು, ಈ ಮೂಲಕ ಕಲೆ, ಸಂಸ್ಕೃತಿ, ಶಿಕ್ಷಣವನ್ನು ಪ್ರೋತ್ಸಾಹಿಸುತ್ತಿದ್ದಾರೆ. ದೇಶದ ವಿವಿಧೆಡೆ ಇವರ ಸಂಸ್ಥೆಯು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಯುವ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ರೂಪಿಸಿಕೊಟ್ಟು ಮಾದರಿಯಾಗಿದ್ದಾರೆ. ಜತೆಗೆ, ಅಂಧ ಹಾಗೂ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ನೆರವಾಗಿದ್ದಾರೆ. ಹಲವು ಭಾಷೆಗಳ ಸುಮಾರು 42ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಸುಷ್ಮಾ ವೀರ್‌ ಅವರು ತೆಲುಗು ಚಿತ್ರರಂಗದಲ್ಲಿ ʻಅತ್ಯುತ್ತಮ ಉದಯೋನ್ಮುಖ ನಟಿʼ ಪ್ರಶಸ್ತಿ, ತಮಿಳು ಚಿತ್ರರಂಗದಲ್ಲಿ ʻಅತ್ಯುತ್ತಮ ನಟಿʼ ಪ್ರಶಸ್ತಿಗಳನ್ನು ಗಳಿಸಿದ್ದಾರೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಸೇರಿ ಮಾತನಾಡಿದ ಕಲಾವಿದೆ ಸುಷ್ಮಾ ವೀರ್‌, ದೇಶದ ರಾಜಕೀಯ ಇತಿಹಾಸದಲ್ಲಿ ಆಮ್‌ ಆದ್ಮಿ ಪಾರ್ಟಿಯು ಹೊಸ ಸಂಚಲನ ಸೃಷ್ಟಿಸಿದೆ. ಇದರಿಂದಾಗಿ ಎಲ್ಲ ಪಕ್ಷಗಳೂ ಇಂದು ಸರ್ಕಾರಿ ಶಿಕ್ಷಣ ಹಾಗೂ ಪ್ರಾಥಮಿಕ ಆರೋಗ್ಯದ ಬಗ್ಗೆ ಯೋಚಿಸಲು ಆರಂಭಿಸಿವೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬೇರೆ ಪಕ್ಷಗಳು ಈ ಕ್ಷೇತ್ರಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಬೇಸರ ಸಂಗತಿ. ಜನರ ತೆರಿಗೆ ಹಣವು ಲೂಟಿಯಾಗುವುದಕ್ಕೆ ಅವಕಾಶ ನೀಡದೇ, ಅದನ್ನು ಜನರ ಕಲ್ಯಾಣಕ್ಕೆ ಬಳಸುವ ಆಮ್‌ ಆದ್ಮಿ ಪಾರ್ಟಿಯ ಸಿದ್ಧಾಂತವು ನ್ಯಾಯಯುತವಾಗಿದ್ದು, ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಹಾಗೂ ಬೆಂಗಳೂರು ವಕ್ತಾರೆ ಉಷಾ ಮೋಹನ್ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್