NEWSಕೃಷಿನಮ್ಮರಾಜ್ಯ

ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ರೈತರ ಬೆಂಬಲ : ಕುರುಬೂರು ಶಾಂತಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ಅನ್ನದಾತರು ಬೆಂಬಲ ನೀಡುತ್ತೇವೆ ಎಂದು ರೈತರತ್ನ ಕುರುಬೂರು ಶಾಂತಕುಮಾರ್‌ ಕುಮಾರ್‌ ತಿಳಿಸಿದ್ದಾರೆ.

ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಒದಗಿಸಬೇಕು. ಹಗಲು ವೇಳೆಯಲ್ಲಿ ಕೃಷಿ ಪಂಪ್‌ಶೆಟ್‌ಗಳಿಗೆ 10 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ಬೇಕು. ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು, ಕೃಷಿ ಸಾಲ ನೀತಿ ಬದಲಾಗಬೇಕು.

ದೇಶದ ಜನರ ಆಹಾರ ಉತ್ಪಾದನೆ ಮಾಡುವ ರೈತನಿಗೆ ಕೃಷಿ ಸಾಲ ಬಡ್ಡಿ ರಹಿತವಾಗಿ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೀಡುವಂತ ಯೋಜನೆ ಜಾರಿಗೆ ಬರಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಕೈ ಬಿಡುವುದಾಗಿ ಭರವಸೆ ನೀಡಬೇಕು. ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿ ಮಾಡುವ ಭರವಸೆ ನೀಡಬೇಕು. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು.

ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿ ಮಾಡಬೇಕು. ಎಲ್ಲ ಬೆಳೆಗಳಿಗೂ ಅನ್ವಯ ಮಾಡಬೇಕು. ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಿಸಬೇಕು. ಅಗತ್ಯ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು ಆಂತಹ ರೈತರಿಗೆ ಜೀವನ ಭದ್ರತೆ ರೂಪಿಸಬೇಕು.

ಕಬ್ಬಿನ ಎಫ್‌ಆರ್‌ಪಿ ದರ ರೈತರ ಹೊಲದಲ್ಲಿನ ದರ ಎಂದು ನಿಗದಿ ಪಡಿಸಬೇಕು. ಆಲೆಮನೆಗಳಲ್ಲಿ ಕಬ್ಬಿನಿಂದ ಎಥನಾಲ್ ಉತ್ಪಾದನೆಗೆ ಮಾಡಲು ರೈತರಿಗೆ ಅವಕಾಶ ನೀಡಬೇಕು. ಕಬ್ಬು ಬೆಳೆಯ ಉತ್ಪಾದನೆಗೆ ಎನ್ಆರ್‌ಇಜಿ ಯೋಜನೆಯನ್ನು ಸೇರಿಸಬೇಕು. ಗ್ರಾಮೀಣ ಯುವಕರ ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು, ಗ್ರಾಮೀಣ ಭಾಗದಲ್ಲಿ ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ, ಭರವಸೆ ಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ರೈತರ ಗಂಡು ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡಬೇಕು. ಕೃಷಿ ಉತ್ಪನ್ನ ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು. ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳಿಗೆ ಪ್ರತ್ಯೇಕ ಮಾರುಕಟ್ಟೆ , ಪ್ರತ್ಯೇಕ ಹೆಚ್ಚುವರಿ ದರ ನಿಗದಿ ಯೋಜನೆ ಜಾರಿಗೆ ಬರಬೇಕು.

ವಿದೇಶಿ ಬಹುರಾಷ್ಟ್ರೀಯ ಬಂಡವಾಳಶಾಹಿ ಕಂಪನಿಗಳು ಚಿಲ್ಲರೆ ಮಾರಾಟ ವ್ಯವಸ್ಥೆಗೆ, ಕೃಷಿ ಕ್ಷೇತ್ರದಲ್ಲಿ ಹೂಡಿಕೆ ನಿಷೇಧವೆರಬೇಕು. ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕುಟುಂಬಸ್ಥರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೂಳ್ಳಬಾರದು. ರಾಜ್ಯದಲ್ಲಿ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆ ನೀಡಬೇಕು.

ಕಬ್ಬಿನ ಹೆಚ್ಚುವರಿ ದರ 150 ರೂ. ನಿಗದಿ ಆದೇಶ ವಿಚಾರದಲ್ಲಿ ರಾಜ್ಯ ಸರ್ಕಾರದ ಇಬ್ಬಗೆ ನೀತಿ ಅನುಸರಣೆಯಿಂದ ರೈತರಿಗೆ ಕಾರ್ಖಾನೆಗಳು ಹಣ ನೀಡುತ್ತಿಲ್ಲ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಲಿ, ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಮಂತ್ರಿಗಳಿಗೆ ಹಳ್ಳಿಗಳಿಗೆ ಬಂದಾಗ ಘೇರಾವ್ ಕಾರ್ಯಕ್ರಮ ಮಾಡಬೇಕಾಗುತ್ತದೆ. ರಾಜ್ಯದ ರೈತರ ಪ್ರಣಾಳಿಕೆಯನ್ನು ರಾಜ್ಯದಲ್ಲಿರುವ ಪ್ರಬಲವಾದ ಯಾವ ಪಕ್ಷ ಒಪ್ಪಿಗೆ ಸೂಚಿಸಿ ಜಾರಿಗೆ ತರಲು ಭರವಸೆ ನೀಡುತ್ತದೋ ಆಂತಹ ಪಕ್ಷ ಬೆಂಬಲಿಸಲು ಕರೆ ನೀಡಲಾಗುವುದು ಎಂದು ಶಾಂತಕುಮಾರ್ ತಿಳಿಸಿದ್ದಾರೆ

ಪತ್ರಿಕಾ ಗೋಷ್ಠಿಯಲ್ಲಿ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ನಾರಾಯಣ ರೆಡ್ಡಿ, ರೈತ ಮುಖಂಡರಾದ ಅತ್ತಹಳ್ಳಿ ದೇವರಾಜು, ಪರಸುರಾಮ ಎತ್ತಿನಗುಡ್ಡ, ಗೋವಿಂದರಾಜು ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್