ಬೆಂಗಳೂರು: ಸಾರಿಗೆ ನೌಕರರ ವೇತನ ಮತ್ತು ಕೆಪಿಟಿಸಿಎಲ್ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು ಇಂದೇ (ಮಾ.16) ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ. ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಹೆಚ್ಚಳ ಮಾಡಿ ಇಂದು ಮಧ್ಯಾಹ್ನವೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
ಬುಧವಾರ ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಮತ್ತು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ನಡೆದ ಸಭೆ ವಿಫಲವಾಗಿದೆ. ಆದರೆ, ಇಂದು ದಿಡೀರ್ ಎಂದು ಸಿಎಂ ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಹೇಳಿದ್ದು, ಇದನ್ನು ನೌಕರರು ಮತ್ತು ನೌಕರರ ಸಂಘಟನೆಗಳು ಯಾವ ರೀತಿ ತೆಗೆದುಕೊಳ್ಳುತ್ತೇವೆ ಎಂಬುದರ ಬಗ್ಗೆ ಕಾದು ನೋಡಬೇಕಿದೆ.