NEWSಸಿನಿಪಥ

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಜನ್ಮದಿನ -ಅಪ್ಪು ಸಮಾಧಿ ಬಳಿ ಅಭಿಮಾನಿಗಳ ದಂಡು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಕರ್ನಾಟಕ ರತ್ನ, ನಟ ಪವರ್ ಸ್ಟಾರ್, ದಿ. ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳದಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಅಪಾರ ಅಭಿಮಾನಿಗಳು ಸೇರಿದ್ದು, ಪುನೀತ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಕೊರುತ್ತಿದ್ದಾರೆ. ಇತ್ತ ಸೆಲೆಬ್ರಿಟಿಗಳು, ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಇನ್ನು ಕಂಠೀರವ ಸ್ಟುಡಿಯೋಗೆ ಡಾ.ರಾಜ್ ಕುಟುಂಬಸ್ಥರು ಭೇಟಿ ನೀಡಿದ್ದು ದಿ. ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಪ್ಪು ನೆನೆದು ಪೋಸ್ಟ್ ಹಾಕಿರುವ ನಟ ಶಿವರಾಜ್ ಕುಮಾರ್, ನನಗೆ ಪ್ರತಿ ಪದವು ಪ್ರೀತಿ ಮಮತೆಯಿಂದ ಕೂಡಿದ್ದು, ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನೀನು ನಕ್ಕರೆ ಎಲ್ಲರೂ ನಗುತ್ತಾ ಇದ್ದರು. ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪು ಎಂದಿಗೂ ಅಮರ ಹ್ಯಾಪಿ ಬರ್ತಡೆ ಅಪ್ಪು ಎಂದು ಶುಭಾಶಯ ತಿಳಿಸಿದ್ದಾರೆ.

ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮ ಬಿಟ್ಟು ಬಾರದ ಲೋಕಕ್ಕೆ 2021ರ ಅಕ್ಟೋಬರ್‌ 29ರಂದು ಪಯಾಣ ಬೆಳೆಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ನಾಡಿನ ಮೂಲೆ ಮೂಲೆಯಿಂದ ಬೆಂಗಳೂರಿನತ್ತ ಧಾವಿಸಿ ಲಕ್ಷಾಂತರ ಅಭಿಮಾನಿಗಳ ದಂಡು ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಾಗರೋಪಾದಿಯಲ್ಲಿ ನೆರೆದಿತ್ತು.

ಈ ನಡುವೆ ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಜತೆಗೆ ಸ್ಯಾಂಡಲ್‌ವುಡ್ ಸೇರಿ ಭಾರತೀಯ ಚಿತ್ರರಂಗದ ವಿವಿಧ ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪುನೀತ್ ಅವರ ಸ್ನೇಹಿತರು, ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ ಅಗಲಿದ ನಟನ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದರು.

ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಅವರ ಪಾರ್ಥಿವ ಶರೀರ ನೋಡಿದ ಅಭಿಮಾನಿಗಳ ದುಃಖದ ಕಟ್ಟೆ ಸ್ಫೋಟಗೊಂಡತ್ತು. ಅಪ್ಪೂ, ಪುನೀತಣ್ಣ, ಸಾರ್ ಮತ್ತೆ ಹುಟ್ಟಿ ಬನ್ನಿ ಹೀಗೆ ಘೋಷಣೆಗಳು ಮುಗಿಲು ಮುಟ್ಟಿದ್ದವು. ನೂಕುನುಗ್ಗಲಲ್ಲೇ ಸಾಗಿ ಅಪ್ಪುಗೆ ಅಂತಿಮ ನಮನ ಸಲ್ಲಿಸಿದ್ದರು ಅಭಿಮಾನಿ ದೇವರುಗಳು.

ಅದೇ ಅಭಿಮಾನಿಗಳು ಇಂದು ಅವರ ಹುಟ್ಟು ಹಬ್ಬಕ್ಕೆ ಶುಭಾಶಯಕೋರಲು ಅವರ ಸಮಾಧಿ ಬಳಿ ಬರುತ್ತಿದ್ದಾರೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರ ರಿಲೀಸ್: ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಪುನೀತ್ ಅವರ ಡ್ರೀಮ್ ಪ್ರಾಜೆಕ್ಟ್. ಪುನೀತ್ ಅವರ ಮೊದಲ ವರ್ಷದ ಪುಣ್ಯತಿಥಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಇದನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿತ್ತು. ಇದನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಈ ಡಾಕ್ಯುಮೆಂಟರಿ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇಂದಿನಿಂದ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ‘ಗಂಧದ ಗುಡಿ’ ಪ್ರಸಾರ ಆರಂಭಿಸಲಿದೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ ಗಿಫ್ಟ್ ಆಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ