ಬೆಳಗಾವಿ: ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರ‍್ಯಾಲಿ ನಡೆಸುತ್ತೇವೆ. ಅಂದು ಯುವಕರಿಗೆ ಯೋಜನೆ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ಇಂದು ಸುದ್ದಿಗಾರರ ಜತೆ ಮಾತನಾಡಿದದ ಅವರು, ಅಂದು ಹಮ್ಮಿಕೊಂಡಿರುವ ರ‍್ಯಾಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಪಾಲ್ಗೊಳ್ಳಲಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಬೊಮ್ಮಯಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ. ಪಿಎಸ್‌ಐ ಹುದ್ದೆ ಸೇರಿದಂತೆ ಸರ್ಕಾರಿ ಹುದ್ದೆಯನ್ನು ಮಾರಾಟ ಮಾಡಿದ್ದಾರೆ. ಕೈಗಾರಿಕೋದ್ಯಮಗಳು ಅನ್ಯರಾಜ್ಯಗಳ ಪಾಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದು. ಮೋದಿ ರೋಡ್ ಶೋ ಮಾಡಿದ ದಿನವೇ ಬೆಲೆ ಏರಿಕೆ ಆಗಿದೆ. ಹೀಗಾಗಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವ್ಯಂಗ್ಯವಾಡಿದರು.