NEWSನಮ್ಮರಾಜ್ಯರಾಜಕೀಯ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯದ ಕಡಗಣನೆ: ಆಮ್‌ ಆದ್ಮಿ ಪಾರ್ಟಿ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಾಡಿನ ಶಿಕ್ಷಣ ಕ್ಷೇತ್ರಕ್ಕೆ ಲಿಂಗಾಯತ ಮಠಗಳು ಹಾಗೂ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಇವುಗಳು ಇಲ್ಲದಿದ್ದರೆ ರಾಜ್ಯವು ಶಿಕ್ಷಣದಲ್ಲಿ ಹಿಂದುಳಿದು ಬಿಹಾರ ಹಾಗೂ ಉತ್ತರ ಪ್ರದೇಶದಂತೆ ಆಗುತ್ತಿತ್ತು. ಆದರೆ ಇಂದು ರಾಜಕೀಯ ಕಾರಣಗಳಿಗಾಗಿ ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡುವಂತಹ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂದರು.

ಇನ್ನು ಬಿಜೆಪಿಯು ಬಿ.ಎಸ್‌.ಯಡಿಯೂರಪ್ಪನವರನ್ನು ಕೇವಲವಾಗಿ ನಡೆಸಿಕೊಂಡಿದ್ದು, ದಿಢೀರ್‌ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆಳಿಸಿತು. ನಂತರ ಲಿಂಗಾಯತ ಸಮುದಾಯದ ಓಲೈಕೆಗಾಗಿ ಬಿಜೆಪಿಯ ಕೇಂದ್ರ ಸಮಿತಿಯಲ್ಲಿ ಸ್ಥಾನ ನೀಡಲಾಯಿತು. ವೀರೇಂದ್ರ ಪಾಟೀಲ್‌ ಅವರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣಕ್ಕೆ ಕಾಂಗ್ರೆಸ್‌ ಪಕ್ಷ ಅನುಭವಿಸಿದ ಸೋಲುಗಳನ್ನೇ ಬಿಜೆಪಿ ಕೂಡ ಅನುಭವಿಸಲಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ನೀತಿಗಳು ಹಾಗೂ ಬಸವಣ್ಣನವರು ತತ್ತ್ವಗಳು ಒಂದೇ ಆಗಿವೆ. ಸಮಾನತೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕೆಂದು ಬಸವಣ್ಣನವರು 12ನೇ ಶತಮಾನದಲ್ಲೇ ಪ್ರತಿಪಾದಿಸಿದ್ದರು. ಆಮ್‌ ಆದ್ಮಿ ಪಾರ್ಟಿಯು ದೆಹಲಿಯಲ್ಲಿ ಅವುಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತಂದಿದೆ ಎಂದರು.

ಇನ್ನು ಬಸವಣ್ಣನವರ ನಾಡಿನಲ್ಲೂ ಅದೇ ಮಾದರಿಯ ಆಡಳಿತ ನೀಡಲು ಈ ಚುನಾವಣೆಯಲ್ಲಿ ಅವಕಾಶ ದೊರೆಯುವ ವಿಶ್ವಾಸವಿದೆ. ರಾಜ್ಯದ ಅನೇಕ ಲಿಂಗಾಯತ ಯುವಕರು ಹಾಗೂ ಮುಖಂಡರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ನಮ್ಮ ಉತ್ಸಾಹ ಹೆಚ್ಚಿಸಿದೆ ಎಂದು ರವಿಚಂದ್ರ ನೆರಬೆಂಚಿ ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿಯವರು 2ಎ ಮೀಸಲಾತಿ ನೀಡುವುದಾಗಿ ತಾಯಿಯ ಮೇಲೆ ಆಣೆ ಮಾಡಿ ಹೇಳಿ, ನಂತರ ಕಡೆಗಣಿಸಿರುವುದು ಇಡೀ ಸಮುದಾಯಕ್ಕೆ ಮಾಡಿರುವ ಅವಮಾನ, ಶಿಕ್ಷಣ ಹಾಗೂ ನೌಕರಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿ ಮಾತನಾಡಿ, “ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಉಚಿತವಾಗಿ ಸಿಗಬೇಕೆಂದು ಬಸವಣ್ಣ ಹೇಳಿದ್ದಾರೆ. ಆಮ್‌ ಆದ್ಮಿ ಪಾರ್ಟಿಯು ಬಸವಣ್ಣನವರ ತತ್ತ್ವಗಳ ಮಾರ್ಗದಲ್ಲಿ ಸಾಗುತ್ತಿದ್ದರೆ, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಸವಣ್ಣನವರ ಹೆಸರನ್ನು ಕೇವಲ ತೋರಿಕೆಗಾಗಿ ಬಳಸಿಕೊಳ್ಳುತ್ತಿವೆ. ಬಸವಣ್ಣನವರ ತತ್ತ್ವಗಳನ್ನು ಗಾಳಿಗೆ ತೂರಿ, ಜಾತಿ-ಧರ್ಮ ರಾಜಕೀಯದಲ್ಲಿ ತೊಡಗಿಕೊಂಡಿವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಉಪಾಧ್ಯಕ್ಷ ಡಾ. ಬಿ.ಎಲ್.ವಿಶ್ವನಾಥ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ