NEWSನಮ್ಮಜಿಲ್ಲೆನಮ್ಮರಾಜ್ಯ

38 ತಿಂಗಳ ಸಾರಿಗೆ ನೌಕರರ ಹಿಂಬಾಕಿಗೂ ಕತ್ತರಿ! – ಶೇ.15ರಷ್ಟು ವೇತನ ಹೆಚ್ಚಳ, ಅಡ್ಡಗೋಡೆ ಮೇಲೆ ದೀಪವಿಟ್ಟ ಸರ್ಕಾರ

ಸರ್ಕಾರದ ತಾರತಮ್ಯ ಧೋರಣೆ ಖಂಡಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಮುಷ್ಕರ ಖಚಿತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಸಾರಿಗೆ ನೌಕರರ ಮೂಲ ವೇತನಕ್ಕೆ ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವ ವಿಚಾರವಾಗಿ ಹೊರಡಿಸಿರುವ ಸರ್ಕಾರಿ ಆದೇಶದಿಂದ ಸಾರಿಗೆ ನೌಕರರಿಗೆ ಭಾರಿ ಅನ್ಯಾಯವಾಗಿದೆ. ಹೀಗಾಗಿ ಈ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ಅನ್ಯ ಮಾರ್ಗವಿಲ್ಲದೆ ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.

ಇಂದು (ಶನಿವಾರ- ಮಾ.18) ಮಧ್ಯಾಹ್ನ ಈ ಸಂಬಂಧ ವಿಲ್ಸನ್‌ಗಾರ್ಡ್‌ನಲ್ಲಿರುವ ಸಾರಿಗೆ ನೌಕರರ ಕೂಟದ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಶೇಖರ್‌, ವೇತನ ಸಂಬಂಧ ಸರ್ಕಾರ 2020 ಡಿಸೆಂಬರ್‌ನಲ್ಲಿ ಮತ್ತು 2021 ಏಪ್ರಿಲ್‌ನಲ್ಲಿ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ಅಂದಿನ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ್ ಸವದಿ, ಗೃಹ ಮಂತ್ರಿಗಳಾಗಿದ್ದ ಹಾಗೂ ಹಾಲಿ ಮುಖ್ಯ ಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ಭರವಸೆ ಕೊಟ್ಟಿತ್ತು.

ಆ ವೇಳೆ ಮೂರು ತಿಂಗಳ ಒಳಗೆ ಈಡೇರಿಸುವ ಭರವಸೆ ನೀಡಿದ್ದರು. ಅಂದಿನ ಸಾರಿಗೆ ಸಚಿವರು ಅನೇಕ ಬಾರಿ ಮಾಧ್ಯಮಗಳಲ್ಲಿ 6 ನೇ ವೇತನ ಆಯೋಗ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿಕೆ ನೀಡಿ ಕೊನೆಗೆ ತೆಗೆದುಕೊಂಡ ಕಾಲಾವಧಿಯಲ್ಲಿ ಈಡೇರಿಸದ ಕಾರಣ ಏಪ್ರಿಲ್-2021ರಲ್ಲಿ ಸಾರಿಗೆ ಮುಷ್ಕರ ಮಾಡಬೇಕಾದ ಸನ್ನಿವೇಶವನ್ನು ಸರ್ಕಾರವೇ ನಿರ್ಮಾಣ ಮಾಡಿತ್ತು.

ಆ ನಂತರವು ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಶ್ರೀರಾಮುಲು ಅವರಲ್ಲೂ ಕೊಟ್ಟ ಭರವಸೆಯನ್ನು ಈಡೇರಿಸುವಂತೆ ಮತ್ತು ನೌಕರರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಈ ಬಿಜೆಪಿ ಸರ್ಕಾರದ ಮುಂದೆ ಸತತ ಮೂರು ವರ್ಷಗಳಿಂದ ಪರಿಪರಿಯಾಗಿ ಬೇಡಿಕೊಂಡರು ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ.

ಇನ್ನು ಸರ್ಕಾರ ಮತ್ತು ಆಡಳಿತ ಮಂಡಳಿಗೆ ಸಾವಿರಾರು ಬಾರಿ ಮನವಿ ಪತ್ರಗಳನ್ನು ನೀಡಿ ಅನೇಕ ಶಾಂತಿಯುತ ಹೋರಾಟಗಳನ್ನು ಮಾಡಿದರೂ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಬದಲಿಗೆ ಸಾರಿಗೆ ಸಚಿವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನು 7 ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು. ನನ್ನ ಕಮಿಟ್ಮೆಂಟ್ (ಜವಾಬ್ದಾರಿ) ಎಂಬ ಹೇಳಿಕೆಗಳಿಗೆ ಮಾತ್ರ ಸಿಮೀತರಾಗಿದ್ದಾರೆ.

ಹೀಗಾಗಿ ಸರ್ಕಾರ ಸಾರಿಗೆ ನೌಕರರನ್ನು ಕಡೆಗಣಿಸುತ್ತಿರುವುದನ್ನು ಖಂಡಿಸಿ ಹಾಗೂ ಈ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು 01/03/2023 ರಿಂದ ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೆವು.

ಆದರೆ ಸರ್ಕಾರ 4 ದಿನ ಕಳೆದರು ಯಾವುದೇ ರೀತಿಯ ಭರವಸೆಗಳ ಈಡೇರಿಕೆಗೆ ಮುಂದಾಗದ ಕಾರಣ. ಕಾನೂನು ಪ್ರಕಾರ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಇದೇ ಮಾ.24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದೇವೆ.

ಮಧ್ಯಂತರ ಪರಿಹಾರವಾಗಿ 17% ವೇತನ ಹೆಚ್ಚಳ ನಮಗ್ಯಾಕಿಲ್ಲ: ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ ಕೆಲವೇ ಗಂಟೆಗಳಲ್ಲಿ 7 ನೇ ವೇತನ ಜಾರಿಗೊಳಿಸುವ ಭರವಸೆಯೊಂದಿಗೆ ಮಧ್ಯಂತರ ಪರಿಹಾರವಾಗಿ 17% ವೇತನ ಹೆಚ್ಚಳ ಮಾಡಲಾಗಿದೆ ಹಾಗೂ ನಿಗಮಗಳಲ್ಲಿ ಒಂದಾದ ಕೆ.ಪಿ.ಟಿ.ಸಿ.ಎಲ್ ನೌಕರರು ಮುಷ್ಕರಕ್ಕೆ ಕರೆ ನೀಡಿದ ತಕ್ಷಣ ಅವರ ಒಟ್ಟು ವೇತನಕ್ಕೆ 20% ವೇತನ ಹೆಚ್ಚಳ ಮಾಡಲಾಗಿದೆ.

ಆದರೆ ಸಾರಿಗೆ ನೌಕರರಿಗೆ ಮಾತ್ರ ಕೊಟ್ಟ ಲಿಖಿತ ಭರವಸೆ ಈಡೇರಿಸದೆ ಮೂಲವೇತನಕ್ಕೆ ಕೇವಲ 15% ನೀಡಿ, ಬಾಕಿ ಎಲ್ಲ ಆರ್ಥಿಕ ಸವಲತ್ತುಗಳನ್ನು ಕಡಿತ ಮಾಡಲಾದ ಸರ್ಕಾರಿ ಆದೇಶ ಹೊರಡಿಸಿರುವುದು ಸಾರಿಗೆ ನೌಕರರನ್ನು ಮತ್ತಷ್ಟು ಆರ್ಥಿಕವಾಗಿ ಹೀನಾಯ ಸ್ಥಿತಿಗೆ ದೂಡುವ ಕೆಲಸ ಮಾಡಿದೆ.

ಹೀಗಾಗಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಈಗಾಗಲೇ ಕಾನೂನು ಬದ್ಧವಾಗಿ ಎಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಷ್ಕರದ ನೋಟಿಸ್ ನೀಡಲಾಗಿದೆ. ಸರ್ಕಾರ ಕೂಡಲೇ ನಮ್ಮ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ 24-03-2023 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಮಾಡಲಾಗುವುದು.

ಪ್ರಮುಖ ಬೇಡಿಕೆಗಳು: 1) ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ನೌಕರರಿಗೆ ಆಗಿರುವ ಎಲ್ಲಾ ಸಮಸ್ಯೆಗಳನ್ನು ನಿವಾರಣೆ ಮಾಡಿ  06/04/2021 ರ ಯಥಾಸ್ಥಿತಿ ಕಾಪಾಡುವುದು.

2) ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನವನ್ನು   01/01/2020 ರಿಂದ ಅನ್ವಯವಾಗುವಂತೆ ನೀಡುವುದು.

3) ಇಲಾಖೆಯಲ್ಲಿನ ಎಲ್ಲ ಸಮಸ್ಯೆಗಳಿಗೆ ಕಾರ್ಮಿಕ ಸಂಘಟನೆಗಳಿಗೆ ಚುನಾವಣೆಯನ್ನು ಮಾಡದಿರುವುದೇ ಮೂಲ ಕಾರಣವಾಗಿರುವುದರಿಂದ ತುರ್ತಾಗಿ ನಿಗದಿತ ಅವದಿಯೋಳಗೆ ಸಂಘಟನೆಗಳಿಗೆ ಚುನಾವಣೆಯನ್ನು ನಡೆಸುವುದು.

4) ಸಾರಿಗೆ ಸಂಸ್ಥೆಯಲ್ಲಿ ನಡೆಯುತ್ತಿರುವ ಖಾಸಗೀಕರಣಕ್ಕೆ ಪೂರಕವಾದ ಎಲ್ಲ ಯೋಜನೆಯನ್ನು ಕೂಡಲೇ ಕೈಬಿಡುವುದು.

ಸುದ್ದಿಗೋಷ್ಠಿಯಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಮತ್ತು ಸಾರಿಗೆ ನೌಕರರು ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...