NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.31ರ ಸಾರಿಗೆ ಕಾರ್ಮಿಕ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ ಮುಂದೂಡಿದೆ.

ಈ ಬಗ್ಗೆ ಅಧಿಕೃತವಾಗಿ ತಿಳಿಸಿರುವ ಜಂಟಿ ಕ್ರಿಯಾ ಸಮಿತಿ, 09.12.2024 ರಂದು ಜಂಟಿ ಕ್ರಿಯಾ ಸಮಿತಿಯು ಸಾರಿಗೆ ನಿಗಮಗಳ ಕಾರ್ಮಿಕರು ಡಿ.31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ನೋಟಿಸ್‌ ಅನ್ನು ಮುಖ್ಯಮಂತ್ರಿಯವರಿಗೆ ನೀಡಿತ್ತು. ಈ ಮಧ್ಯೆ ಆಡಳಿತ ವರ್ಗ ಕಾರ್ಮಿಕ ಇಲಾಖೆಯ ಮೂಲಕ ಡಿ.27ರಂದು ಕಾರ್ಮಿಕ ಆಯುಕ್ತರೊಂದಿಗೆ ರಾಜೀಸಂಧಾನ ಸಭೆಯನ್ನು ಏರ್ಪಡಿಸಿತ್ತು.

ಮಾಜಿ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರು ನಿಧನರಾದ ಕಾರಣ ರಾಜ್ಯ ಸರ್ಕಾರವು ಅಂದು ಶೋಕಾಚರಣೆಯ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಪರಿಣಾಮ ಸಂಧಾನ ಸಭೆ ಡಿ.30 ಕ್ಕೆ ಮುಂದೂಡಿಕೆಯಾಗಿದೆ.

ಈ ನಡುವೆ ಇಂದು (ಡಿ.29) ಸಂಜೆ ಮುಖ್ಯಮಂತ್ರಿಗಳ ಜತೆ ಸಾರಿಗೆ ಸಚಿವರು, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು, ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ನಡೆಸಿದ ಸಭೆಯ ಫಲಶೃತಿಯಾಗಿ, ಸಾರಿಗೆ ಸಚಿವರು ಜಂಟಿ ಕ್ರಿಯಾ ಸಮಿತಿಗೆ ಉದ್ದೇಶಿತ ಸಾರಿಗೆ ಮುಷ್ಕರವನ್ನು ಹಿಂಪಡೆಯಬೇಕೆಂದು ಲಿಖಿತವಾಗಿ ಮನವಿ ಮಾಡಿದ್ದಾರೆ.

ಅಲ್ಲದೆ ಸಂಕ್ರಾಂತಿ ಹಬ್ಬದ ನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯ ಮಂತ್ರಿಗಳ ಜತೆ ಸಭೆ ಏರ್ಪಡಿಸುವುದಾಗಿ ಕೋರಿರುವ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಲಾಗಿದ್ದ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿಯು ಒಮ್ಮತದಿಂದ ಮುಂದೂಡಿದೆ.

ಗಾಗಿ ಜಂಟಿ ಕ್ರಿಯಾ ಸಮಿತಿಯ ಮುಷ್ಕರದ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕರಿಗೂ, ಜಂಟಿ ಕ್ರಿಯಾ ಸಮಿತಿಯ ಸಹಭಾಗಿ ಸಂಘಟನೆಗಳ ಎಲ್ಲ ಕಾರ್ಯಕರ್ತರಿಗೂ ನಾವು ಅಭಿನಂದನೆಗಳನ್ನು ತಿಳಿಸುತ್ತೇವೆ. ಈ ಸಂದರ್ಭದಲ್ಲಿ ಸಾಧಿಸಲಾದ ಕಾರ್ಮಿಕರ ಐಕ್ಯತೆಯನ್ನು ಮುಂದೆಯೂ ಕಾಪಾಡಿಕೊಳ್ಳಬೇಕೆಂದು ಎಲ್ಲ ನೌಕರರಲ್ಲಿ ಮನವಿ ಮಾಡುತ್ತೇವೆ.

ನಮ್ಮೊಡನೆ, ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಒಪ್ಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ, ಸಾರಿಗೆ ಸಚಿವರಾದ ಸ ರಾಮಲಿಂಗಾರೆಡ್ಡಿಯವರಿಗೂ, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳಿಗೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲ ಸಂಘಟನೆಗಳಿಗೂ ವಂದನೆಗಳನ್ನು ಸಲ್ಲಿಸುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುಷ್ಕರವನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಎಲ್ಲ ನೌಕರರೂ ಡಿ.31ರಿಂದ ಕೆಲಸಕ್ಕೆ ಹಾಜರಾಗಬೇಕೆಂದು ಎಲ್ಲ ನೌಕರರಿಗೂ ವಿನಂತಿಸುತ್ತೇವೆ ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ