Breaking NewsNEWSನಮ್ಮರಾಜ್ಯ

ಏ.15ರಂದು ಸಿಎಂ ಮನೆ ಮುಂದೆ ಸಾರಿಗೆ ನೌಕರರ ಧರಣಿ: ಜಂಟಿ ಕ್ರಿಯಾ ಸಮಿತಿ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸಂಕ್ರಾಂತಿ ಬಳಿಕ ಸಾರಿಗೆ ಸಂಘಟನೆಗಳ ಸಭೆ ಕರೆಯುತ್ತೇವೆ ಎಂದು ಹೇಳಿ ಈವರೆಗೂ ಸಭೆ ಕರೆಯದಿರುವುದಕ್ಕೆ ಆಕ್ರೋಶಗೊಂಡಿರುವ ಜಂಟಿ ಕ್ರಿಯಾ ಸಮಿತಿ ಇದೇ ಏ.15ರಿಂದ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಕಳೆದ 2024ರ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡ ಅವರು ಮನವಿ ಮಾಡಿದ್ದರಿಂದ ಜಂಟಿ ಕ್ರಿಯಾ ಸಮಿತಿ ಅಂದು ಧರಣಿಯನ್ನು ಮುಂದೂಡಿತ್ತು.

ಆ ಬಳಿಕ ಅಂದರೆ ಸಂಕ್ರಾಂತಿ ಮುಗಿದ ಕೂಡಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಘಟನೆಗಳ ಸಭೆ ಕರೆದು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಸಚಿವರು ಮನವಿ ಮಾಡಿದ್ದರು.

ಹೀಗಾಗಿ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಡಿ.29ರಂದು ಹೇಳಿಕೆ ನೀಡಿತ್ತು. ಆ ಬಳಿಕ ಅಂದರೆ ಜನವರಿ 15ರ ಬಳಿಕ ಸಭೆ ಕರೆಯುತ್ತೇವೆ ಎಂದು ಹೇಳಿದ ಸರ್ಕಾರ ಅಥವಾ ಸಚಿವರು ಈವರೆಗೂ ಸಂಘಟನೆಗಳ ಸಭೆ ಕರೆದಿಲ್ಲ ಆದ್ದರಿಂದ ಮತ್ತೆ ಮುಷ್ಕರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಇನ್ನು ಇದೇ ಏ.15ರಿಂದ ಮುಖ್ಯಮಂತ್ರಿ ಮನೆಮುಂದೆ ಧರಣಿ ಕೂರುವುದಾಗಿತಿಳಿಸಿದ್ದು, ನಾವು ಈವರೆಗೂ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ಕರೆಯುತ್ತಾರೆ ಎಂದು ಕಾದು ನೋಡಿದ್ದೇವೆ. ಅದರಂತೆ ಏ.5ರಂದು ಸಭೆಯನ್ನು ನಿಗದಿ ಮಾಡಿದ್ದರು ಆದರೆ, ಆ ಸಭೆಯನ್ನು ಮುಂದೂಡಿದ್ದು 7ದಿನಗಳು ಕಳೆದರೂ ಈವರೆಗೂ ಯಾವುದೆ ಮಾಹಿತಿ ಇಲ್ಲ.

ಹೀಗಾಗಿ ನಾವು ಇದೇ ಏ.15ರಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಆದರಿಂದ ಏ.15ರಂದು ಸಾರಿಗೆ ಬಸ್‌ ವ್ಯತ್ಯಯವಾಗುವ ಸಂಭವ ಹೆಚ್ಚಿದೆ ಎಂದು ಹೇಳಲಾಗುತ್ತಿದ್ದು, ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರು ಈ ಬಗ್ಗೆ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ.

Deva
the authorDeva

Leave a Reply

error: Content is protected !!
Latest news
KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ