CrimeNEWS

ಮನೆ ಬಾಡಿಗೆ ವಸೂಲಿ ಮಾಡಿಕೊಡಿ ಎಂದ ಮಾಲೀಕನಿಂದಲೇ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಮನೆ ಬಾಡಿಗೆ ಕೊಡುತ್ತಿಲ್ಲ, ಅದನ್ನು ವಸೂಲಿ ಮಾಡಿಕೊಡಿ ಎಂದು ಠಾಣೆಗೆ ಹೋದವರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುವಾಗ ಪಿಎಸ್‌ಐ ಮತ್ತು ಕಾರು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಣಿಬೆನ್ನೂರು ತಾಲೂಕಿನಲ್ಲಿ ನಡೆದಿದೆ.

ರಾಣಿಬೆನ್ನೂರು ತಾಲೂಕಿನ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ತೇಲಿ ಹಾಗೂ ಕಾರು ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದವರು.

ಫಿರೋಜ್ ಎಂಬುವವರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ಪಿಎಸ್‌ಐ ಸುನೀಲ್ ತೇಲಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ ಫಿರೋಜ್ ಅವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಪಿಎಸ್‌ಐ ಸುನೀಲ್ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾರೆ.

ಪಿಎಸ್‌ಐ ಸುನೀಲ್ ಮತ್ತು ಕಾರು ಚಾಲಕ ಸಚಿನ್ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್