ಬೆಂಗಳೂರು: ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು 32ನೇ ಎಸಿಎಂಎಂ ನ್ಯಾಯಾಲಯ ವಿಧಿಸಿದೆ.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದವು. ದೂರು ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಈ ವೇಳೆ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಚೇತನ್ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶಿವಕುಮಾರ್ ಆರೋಪಿಸಿ ದೂರು ನೀಡಿದ್ದು, ಅವರು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲೇ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಆದರೆ, ಚೇತನ್ ಕುಮಾರ್ ವಿಚಾರದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಫೆಬ್ರವರಿ 2022 ರಲ್ಲಿ, ಹಿಜಾಬ್ ವಿವಾದದ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ವಿರುದ್ಧವೂ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್‌ಗಾಗಿ ಚೇತನ್ ಅವರನ್ನು ಬಂಧಿಸಲಾಗಿತ್ತು.