NEWSನಮ್ಮರಾಜ್ಯರಾಜಕೀಯ

ಚಾಮರಾಜನಗರ ಬಿಜೆಪಿ ಮುಖಂಡರಿಂದಲೇ ಸಚಿವ ಸೋಮಣ್ಣಗೆ ಗೋ ಬ್ಯಾಕ್‌ ಚಳವಳಿಯ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಸಚಿವ ವಿ. ಸೋಮಣ್ಣಗೆ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಿರುವುದಕ್ಕೆ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದು, ಸೋಮಣ್ಣಗೆ ಟಿಕೆಟ್, ಉಸ್ತುವಾರಿ ಬೇಡ ಗೋ ಬ್ಯಾಕ್‌ ಸೋಮಣ್ಣ ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು “ಗೋ ಬ್ಯಾಕ್ ಸೋಮಣ್ಣ” ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಚಿವ ವಿ. ಸೋಮಣ್ಣಗೆ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ “ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸಲಾಗುವುದು. ಜತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದರಿಂದ ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಫೋಟಗೊಂಡಿದೆ.

ಹನೂರು, ಚಾಮರಾಜನಗರ ಸೇರಿದಂತೆ ಕಾಂಗ್ರೆಸ್ ಶಾಸಕರನ್ನು ಹಾಡಿ ಹೊಗಳುತ್ತಾರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಕ್ಕೆ ಗೈರಾಗಿ ಪಕ್ಷದ ಸಂಘಟನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕಾಂಗ್ರೆಸ್ ಸೇರುತ್ತೇನೆಂದು ವರಿಷ್ಠರಿಗೆ ಬೆದರಿಕೆ ಒಡ್ಡುವ ತಂತ್ರವನ್ನು ಪ್ರಯೋಗಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸೋಮಣ್ಣ ಜಿಲ್ಲಾ ಉಸ್ತುವಾರಿ ಆದ ಬಳಿಕ ಪಕ್ಷದ ಸಂಘಟನೆಯಲ್ಲಿ ತೊಡಗಿಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲೂ ಕೆಲಸ ಮಾಡಿಲ್ಲ, 2018 ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾದರು. ಅವರಿಂದ ಪಕ್ಷಕ್ಕೆ ಯಾವುದೇ ಅನೂಕೂಲವಾಗಿಲ್ಲ. ಇದನ್ನೆಲ್ಲ ಗಮನಿಸಿ ಚುನಾವಣಾ ಉಸ್ತುವಾರಿ ಕೊಡಬಾರದು ಎಂದು ಆಗ್ರಹಿಸಿದರು.

ಇದೇ ವೇಳೆ, ಚಾಮರಾಜನಗರ ಚುನಾವಣಾ ಉಸ್ತುವಾರಿಯಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಬೇಕು. ಯಡಿಯೂರಪ್ಪ ಅವರು ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಪ್ರಚಾರ ನಡೆಸಬೇಕು. ಚಾಮರಾಜನಗರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ ಎಂದು ಬಿಎಸ್‌ವೈ ಹಾಗೂ ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ.

ಒಟ್ಟಿನಲ್ಲಿ ಇನ್ನೂ ಕೂಡ ಬಿಜೆಪಿಯಲ್ಲಿ ಬಿಎಸ್‌ವೈ v/s ವಿ.ಸೋಮಣ್ಣ ಪರಿಸ್ಥಿತಿ ಇದೆ ಎಂಬುದನ್ನು ಇಂದಿನ ಸುದ್ದಿಗೋಷ್ಠಿ ಮತ್ತೊಮ್ಮೆ ಸಾಕ್ಷೀಕರಿಸಿದೆ. ಜತೆಗೆ, ಭಾರತೀಯ ಜನತಾ ಪಕ್ಷದ ಲೆಟರ್ ಹೆಡ್ ನಲ್ಲೇ ಸುದ್ದಿಗೋಷ್ಠಿಗೆ ಆಹ್ವಾನಿಸಿದ್ದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಂತೆ ಇದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ