NEWSನಮ್ಮರಾಜ್ಯರಾಜಕೀಯವಿಜ್ಞಾನ

ಮರಳು ನೀತಿ ಜಾರಿಗೆ ರೂಪುರೇಷೆ

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ರಾಜ್ಯದಲ್ಲಿ ಮರಳುನೀತಿ ಜಾರಿಗೆ ತರುವ ಕುರಿತು ರೂಪುರೇಷೆಗಳನ್ನು ಸಿದಗದ್ದಪಡಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್   ತಿಳಿಸಿದರು.

ಶುಕ್ರವಾರ  ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರಿನ ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಕರಾವಳಿ ಭಾಗದಲ್ಲಿ ಮರಳು ಗಣಿಗಾರಿಕೆ ಅತ್ಯಂತ ಮುಖ್ಯವಾದ ವಿಷಯವಾಗಿದ್ದು ಸುಸ್ಥಿರ ಮರಳು ಗಣಿಗಾರಿಕೆ ನಿರ್ವಹಣೆ ಮಾರ್ಗಸೂಚಿಗಳ ಅನ್ವಯ ಮರಳನ್ನು ತೆರವುಗೊಳಿಸಲು ಹಾಗೂ ಜಲಾಶಯ, ಆಣೆಕಟ್ಟು, ಬ್ಯಾರೇಜ್,  ಕಿಂಡಿ ಆಣೆಕಟ್ಟಿನ ಹಿನ್ನೀರಿನ ಪ್ರದೇಶಗಳಲ್ಲಿ ಹೂಳಿನೊಂದಿಗೆ ಸಂಗ್ರಹವಾಗಿರುವ ಮರಳನ್ನು ತೆರವುಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಸಧನದಲ್ಲಿ ವಿವರಿಸಿದರು.

2019ರ ಸರ್ಕಾರದ ಆದೇಶದ ಮೇರೆಗೆ ಪ್ರವಾಹದಿಂದ ನದಿಗಳ ಪಕ್ಕದ ಕೃಷಿ ಜಮೀನುಗಳಲ್ಲಿ ಸಂಗ್ರಹವಾಗುವ ಮರಳನ್ನು ತೆರವುಗೊಳಿಸಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಸಮಯದಲ್ಲಿ ಅನೇಕ ಸದಸ್ಯರು ರಾಜ್ಯದಲ್ಲಿ ಸಮಗ್ರ ಮರಳು ನೀತಿಯ ಜಾರಿಗೆ ಒತ್ತಾಯಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ