CrimeNEWSನಮ್ಮಜಿಲ್ಲೆ

20 ಲಕ್ಷ ನಗದು, ಬೆಳ್ಳಿ ಆಭರಣಗಳು ಸೇರಿ ಸುಮಾರು 42 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

347 ಲೀಟರ್ ಮದ್ಯ, 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 536 ಕುಕ್ಕರ್ ವಶ : ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ.ಮೌಲ್ಯದ ವಸ್ತುಗಳನ್ನು ನಿನ್ನೆ ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1,66,980 ರೂ.ಮೌಲ್ಯದ 347 ಲೀಟರ್ ಅಕ್ರಮ ಮದ್ಯ,3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಮಾರ್ಚ್ 24 ರಂದು ಪೊಲೀಸರು ಕಾರ್ಯಾಚರಣೆ ನಡೆಸಿ, ಎರಡು ಕಾರುಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 20 ಲಕ್ಷ ರೂ.ನಗದು, 20,22,300 ರೂ.ಮೌಲ್ಯದ 48.156 ಕೆಜಿ ಬೆಳ್ಳಿ, 1,23,000 ರೂ.ಮೌಲ್ಯದ 410 ಸೀರೆಗಳು, 87,800 ರೂ.ಮೌಲ್ಯದ 439 ಚೂಡಿದಾರ್‌ಗಳು.

ಸುಮಾರು 39 ಸಾವಿರ ರೂ.ಮೌಲ್ಯದ ಪ್ಯಾಂಟ್ ಬಟ್ಟೆ,9,800 ರೂ.ಮೌಲ್ಯದ 49 ಶರ್ಟ್ ಪೀಸ್‌ಗಳು ಸೇರಿ ಒಟ್ಟು 42,83,320 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ನೆಲಮಂಗಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಜಿಲ್ಲೆಯಾದ್ಯಂತ 27 ಸಾವಿರಕ್ಕೂ ಅಧಿಕ ಬ್ಯಾನರ್, ಪೋಸ್ಟರ್, ಗೋಡೆ ಬರಹ ತೆರವು: ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಪೂರಕ ವಾತಾವರಣ ನಿರ್ಮಿಸಲು ಶ್ರಮಿಸುತ್ತಿರುವ ಜಿಲ್ಲಾಡಳಿತವು ಕಳೆದ ಮಾ.13 ರಿಂದ ಇಂದು 25 ರ ಬೆಳಗ್ಗೆಯವರೆಗೆ ಜಿಲ್ಲೆಯ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಸುಮಾರು 31 ಸಾವಿರಕ್ಕೂ ಅಧಿಕ ಬ್ಯಾನರ್, ಪೋಸ್ಟರ್, ಗೋಡೆ ಬರಹ ಹಾಗೂ ಇತರೆ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸಿದ ಗೋಡೆ ಬರಹ, ಪೋಸ್ಟರ್ ,ಬ್ಯಾನರುಗಳ ವಿವರ: ಗ್ರಾಮೀಣ ಪ್ರದೇಶಗಳಲ್ಲಿದ್ದ 512 ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ 1124 ಸೇರಿ 1636 ಗೋಡೆಬರಹಗಳು. ಗ್ರಾಮೀಣ ಪ್ರದೇಶಗಳಲ್ಲಿನ 6767 ಹಾಗೂ ಪಟ್ಟಣ,ನಗರ ಪ್ರದೇಶಗಳಲ್ಲಿನ 5496 ಸೇರಿ ಒಟ್ಟು 12,263 ಪೋಸ್ಟರುಗಳು. ಗ್ರಾಮೀಣ ಭಾಗದ 6670 ಹಾಗೂ ಪಟ್ಟಣ ಪ್ರದೇಶಗಳಲ್ಲಿನ 4465 ಸೇರಿ ಒಟ್ಟು 11,135 ಬ್ಯಾನರುಗಳು ಹಾಗೂ 1980 ಇತರೆ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ.

ಖಾಸಗಿ ಸ್ಥಳಗಳಲ್ಲಿ ಬರೆಯಲಾಗಿದ್ದ 580 ಗೋಡೆ ಬರಹಗಳು,1637 ಪೋಸ್ಟರುಗಳು,1631 ಬ್ಯಾನರುಗಳು ಹಾಗೂ 613 ಇತರೆ ಪ್ರಚಾರ ಸಾಮಗ್ರಿಗಳು ಸೇರಿ ಒಟ್ಟು 4,469 ಪ್ರಚಾರ ವಸ್ತುಗಳನ್ನು ತೆಗೆಯಲಾಗಿದೆ.ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ ಎಂ.ತಿರ್ಲಾಪುರ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?