ಬೆಂಗಳೂರು: ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈಗ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ ಅಷ್ಟೇ, ಇದನ್ನು ಬಿಟ್ಟು ಬೇರೆ ಶಾಸಕರ ರಾಜೀನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಇಂದೇ ರಾಜೀನಾಮೆ ನೀಡಬೇಕಿತ್ತು. ಆದರೆ ವಿಧಾನಸಭಾಧ್ಯಕ್ಷರು ಇರಲಿಲ್ಲ. ಹಾಗಾಗಿ ಸೋಮವಾರ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.