ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ನಲ್ಲಿ ಈ ಉತ್ತರಗಳನ್ನು ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದರೆ ತಿಳಿಸಲು ಸಹ ಹೇಳಲಾಗಿದೆ.
ಇದೇ ಮಾರ್ಚ್ 3ರಿಂದ ಮಾ.23ರವರೆಗೂ ರಾಜ್ಯದದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆದಿದ್ದವು.
ಅದರ ಮಾದರಿ ಉತ್ತರಗಳ ಬಿಡುಗಡೆ ಮಾಡಲಾಗಿದ್ದು ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾ. 27ರ ಸಂಜೆ 5 ಗಂಟೆಯ ಒಳಗೆ ಆಕ್ಷೇಪಣೆ ಸಲ್ಲಿಸಲು ಕೋರಿದ್ದಾರೆ.