ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾದ ಜಿ. ರಾಧಿಕಾ ಹಾಗೂ ಸಿಐಡಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ಇಂದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಎಂಟಿಸಿ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾಗಿದ್ದ ರಾಧಿಕಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನಲ್ಲಿ ಖಾಲಿ ಇದ್ದ ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (AIGP-ಜನರಲ್ ) ಹುದ್ದೆಗೆ ನಿಯೋಜಿಸಲಾಗಿದೆ.
ಅದೇ ರೀತಿ ಸಿಐಡಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಖಾಲಿ ಇದ್ದ ಬೆಂಗಳೂರು ನಗರದ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.