CrimeNEWSಶಿಕ್ಷಣ-

ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ವಿಜಯಪಥ ಸಮಗ್ರ ಸುದ್ದಿ

ಮಧುಗಿರಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನೊಬ್ಬನಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ದೊಡ್ಡೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೋರಗುಂಟೆ ಗ್ರಾಮದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಆಗುತ್ತಿತ್ತು. ಇದನ್ನು ಕೇಳಿದ ಗ್ರಾಮಸ್ಥರು ಆಕ್ರೋಶಗೊಂಡು ಥಳಿಸಿದ್ದಾರೆ. ಬಳಿಕ ಆ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿಕ್ಷಕ ಮಂಜುನಾಥ್ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪಾಲಕರಲ್ಲಿ ಹೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ಪಾಲಕರು ಗ್ರಾಮಸ್ಥರಿಗೂ ವಿಷಯ ಮುಟ್ಟಿಸಿ ಸೋಮವಾರ ತರಗತಿಗೆ ಶಿಕ್ಷಕ ಆಗಮಿಸುವ ಮುನ್ನವೇ ಆತನನ್ನು ತಡೆದು ವಿಚಾರಿಸಿ ಗೂಸಾ ಕೊಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ಬಡವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದರು. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ದೂರು ದಾಖಲಾಗಿದೆ. ಶಿಕ್ಷಕ ಮಂಜುನಾಥ್‌ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಕನ್ಯಾಕುಮಾರಿಯಲ್ಲಿ ಪಾದ್ರಿ ಬಂಧನ: ಮತ್ತೊಂದು ಪ್ರಕರಣದಲ್ಲಿ ಈ ಹಿಂದೆ ಮೆಡಿಕಲ್‌ ಕೋರ್ಸ್‌ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೋಮವಾರ ಚರ್ಚ್ ಪಾದ್ರಿಯೊಬ್ಬರನ್ನು ಪೊಲೀಸರು ಕನ್ಯಾಕುಮಾರಿಯಲ್ಲಿ ಬಂಧಿಸಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಪಾದ್ರಿ ಬೆನೆಡಿಕ್ಟ್ ಆಂಟೊ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿ ಪಾದ್ರಿ ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದ, ಆತನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಸೋಮವಾ ನಾಗರ್‌ಕೋಯಿಲ್‌ನ ಫಾರ್ಮ್‌ಹೌಸ್‌ನಲ್ಲಿ ಬಂಧಿಸಿದ್ದಾರೆ.

ಇತ್ತೀಚೆಗೆ ಆರೋಪಿ ಪಾದ್ರಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಪಾದ್ರಿಯ ಲ್ಯಾಪ್‌ಟಾಪ್ ಕಿತ್ತುಕೊಂಡಿತ್ತು. ಅದರಲ್ಲಿ ಆತನ ಖಾಸಗಿ ಸಮಯದ ವಿಡಿಯೋಗಳು ಇದ್ದವು ಎನ್ನಲಾಗಿದೆ. ಆದಾಗ್ಯೂ, ಪಾದ್ರಿ ಯಾರ ವಿರುದ್ಧವೂ ದೂರು ನೀಡಿರಲಿಲ್ಲ.

ಪಾದ್ರಿಯು ಮಹಿಳೆಯೊಂದಿಗೆ ನಡೆಸಿದ ಸರಸ- ಸಲ್ಲಾಪ: ಈ ನಡುವೆ ಪಾದ್ರಿಯು ಮಹಿಳೆಯೊಂದಿಗೆ ನಡೆಸಿದ ಸರಸ- ಸಲ್ಲಾಪದ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆಯೂ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಲ್ಯಾಪ್‌ಟಾಪ್ ವಶಪಡಿಸಿಕೊಂಡ ಒಂದೆರಡು ದಿನಗಳ ನಂತರ, ಪಾದ್ರಿ ಆಂಟೊ ಯುವತಿಯರೊಂದಿಗೆ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್