CrimeNEWSರಾಜಕೀಯ

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಸಂತೋಷ ಕೂಟ’ದ ಕೈವಾಡ : ಕಾಂಗ್ರೆಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದ್ದರ ಹಿಂದೆ ‘ಸಂತೋಷ ಕೂಟ’ದ ಕೈವಾಡ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಬಿ.ಎಲ್. ಸಂತೋಷ್ ವಿರುದ್ಧ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್‌ವೈ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ.

ಆದರೂ ಸರ್ಕಾರದ ಅವಾಂತರಕ್ಕೆ ಯಡಿಯೂರಪ್ಪ ಮನೆ ಮೇಲೆ ದಾಳಿ ಆಗಿದ್ದೇಕೆ ಎಂದು ಪ್ರಶ್ನಿಸಿರುವ ಕಾಂಗ್ರೆಸ್‌ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆಯಾಗಿದೆ ಎಂದು ಹೇಳಿದೆ.

ಇನ್ನು ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ ಎಂದು ಟ್ವೀಟ್ ಮಾಡಿ ಟಾಂಗ್ ನೀಡಿದೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್